ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಿಡಿ: ಮಹಿಳಾ ಮೀಸಲಾತಿ ಹೆಸರಿನಲ್ಲಿ ಬಿಜೆಪಿ ರಾಜಕೀಯ ಗಿಮಿಕ್ – ಗೀತಾ ನಂದಿನಿಗೌಡ ಆರೋಪ

ಚಿತ್ರದುರ್ಗ ಏ. 23

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಮಹಿಳಾ ಮೀಸಲಾತಿ ಹೆಸರಲ್ಲಿ ಕ್ಷೇತ್ರ ಪುನ ರ್ವಿಂಗಡಣೆ ಮಸೂದೆ ಜಾರಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹುನ್ನಾರವು ಇಡೀ ದೇಶದ ಜನರ ಮುಂದೆ ಬಯಲಾಗಿದ್ದು, ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಮಸೂದೆ ಮಂಡನೆಗೆ ಹೋದ ಬಿಜೆಪಿ ಮುಖ ಭಂಗಕ್ಕೀಡಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಗೀತಾ ನಂದಿನಿಗೌಡ ಟೀಕಿಸಿದ್ದಾರೆ.

ಚಿತ್ರದುರ್ಗ ನಗರದ ಜಿಲ್ಲಾ ಮಹಿಳಾ ಕಾಂಗ್ರೆಸ್‍ಸಮಿತಿವತಿಯಿಂದ ಜಿಲ್ಲಾ ಕಾಂಗ್ರೆಸ್ ಕಾರ್ಯಲಯದ ಎದುರು ಗುರುವಾರ ಹಮ್ಮಿಕೊಂಡಿದ್ದ 2023ರ ಮಹಿಳಾ ಮೀಸಲಾತಿ ಮಸೂದೆಯನ್ನು ಕೊಡಲೇ ಜಾರಿಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಬಟನೆಯ ನೇತೃತ್ವವಹಿಸಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷವೆಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಚೆಲ್ಲಾಟವಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿ. ಜೊತೆ ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ಹೊರತು ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರವು ಪ್ರಾಮಾಣಿಕವಾಗಿದ್ದರೆ 2023ರ ಕಾನೂನನ್ನು ಜಾರಿಗೆ ತರಲಿ. ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ 2023 ಕರೆಯಲ್ಪಡುವ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯ ಅನುಷ್ಟಾನವನ್ನು ಹೊಸ ಜನಗಣತಿ ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ, ಅನುಷ್ಟಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು ಪ್ರಜಾಪ್ರಭುತ್ವದ ಗೆಲುವಾಗಿದೆ. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವವನ್ನೇ ದುರ್ಬಲಗೊಳಿಸುವ ಕೇಂದ್ರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು. ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರಿವಾಗಿದೆ. ದಕ್ಷಿಣ ರಾಜ್ಯಗಳಲ್ಲಿ ಕಡಿಮೆ ಸ್ಥಾನವಾಗುವ ಆತಂಕ ಇದೆ ಎಂದಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಚಿತ್ರದುರ್ಗ ಜಿಲ್ಲಾ ಆಶ್ರಯ ಕಮಿಟಿ ಸದಸ್ಯರಾದ ಶ್ರೀಮತಿ ಮುನೀರಾ ಮಕಾನಾದಾರ್ ಮಾತನಾಡಿ, ವಿಂಗಡಣೆ ಮಸೂದೆ ಜಾರಿಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ಬಿಜೆಪಿಯು ಪಂಚ ರಾಜ್ಯಗಳ ಚುನಾವಣೆ ಗಮನದಲ್ಲಿಟ್ಟು ಕೊಂಡು ತರಾತುರಿಯಲ್ಲಿ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿ ಭಾರತದ ಒಕ್ಕೂಟ ರಚನೆ ಬದಲಾಯಿಸಲ-ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು ಎಂದು ಹೇಳಿದ್ದಾರೆ.

ಕೆಪಿಸಿಸಿ ಮಹಿಳಾ ಘಟಕದ ಚಿತ್ರದುರ್ಗ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಪವಿತ್ರ ಮಾತನಾಡಿ, “ಈಗಾಗಲೇ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33 ರಷ್ಟು ಮೀಸಲಾತಿ ಮಸೂದೆಯೂ ಡಾಕ್ಟರ್ ಮನಮೋಹನ್‍ಸಿಂಗ್‍ರವರು ಪ್ರಧಾನಮಂತ್ರಿಯಾಗಿದ್ದಾಗ 2010ರಲ್ಲಿ ಮಂಡನೆಯಾಗಿ ರಾಜ್ಯಸಭೆ ಯಲ್ಲಿ ಇದಕ್ಕೆ ಅನುಮೋದನೆ ದೊರಕಿದ್ದು ಲೋಕಸಭೆಯಲ್ಲಿ ಒಮ್ಮತದ ಕೊರತೆ ಮತ್ತು ಮತದಾನವಾಗದ ಕಾರಣ, ಈ ಮಸೂದೆ ಅಂಗೀಕಾರವಾಗದೆ ಉಳಿಯಿತು ಇದು ಎಲ್ಲರಿಗೂ ಗೊತ್ತಿರುವ ಸತ್ಯವೆ. 2023ರ ಸೆಪ್ಟೆಂಬರ್ 19ರಂದು ಮತ್ತೊಮ್ಮೆ ಸಂವಿಧಾನದ ಆರ್ಟಿಕಲ್ 334ಎ ತಿದ್ದುಪಡಿ ತಂದು ಈ ಮಸೂದೆ ಮಂಡನೆ ಆಯಿತು ಅಂದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಚರ್ಚೆಯಾಗಿ ಸೆಪ್ಟೆಂಬರ್ 20ರಂದು ಎಲ್ಲ ಪಕ್ಷದವರು ಸೇರಿ ಸರ್ವಾನುಮತದಿಂದ ಲೋಕಸಭೆ ಮತ್ತು ರಾಜ್ಯಸಭೆಯಲ್ಲೂ ಮತ್ತೊಮ್ಮೆ ಈ ಮಸೂದೆಯನ್ನು ಅನುಮೋದಿಸಿ ಕೊಟ್ಟಿದ್ದಾರೆ. ಆದರೇ ಮಸೂದೆ ಅನುಮೋದನೆಯಾದ ನಂತರ 2024ರ ಲೋಕಸಭಾ ಚುನಾವಣೆಗೆ ಇದನ್ನು ಕೇಂದ್ರ ಬಿಜೆಪಿ ಸರ್ಕಾರ ಪರಿಗಣಿಸಲಿಲ್ಲ! ಈ ನಡುವೆ ಕೇಂದ್ರದ ಬಿಜೆಪಿ ಸರ್ಕಾರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಮಹಿಳಾ ಮತದಾರರ ಮೇಲೆ ಪ್ರಭಾವವನ್ನು ಬೀರುವ ಸಲುವಾಗಿ ಇದ್ದಕ್ಕಿದ್ದ ಹಾಗೆ ವಿಶೇಷ ಅಧಿವೇಶನವನ್ನು ಕರೆದು ಈಗಾಗಲೇ ಪಾಸ್ ಆಗಿರುವ ಮಹಿಳಾ ಬಿಲ್ ಜೊತೆಗೆ ಸೇರಿಸಿ ಕ್ಷೇತ್ರಗಳ ಪುನರ್ ವಿಂಗಡನೆ ಮತ್ತು ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸುವ ಮಸೂದೆಯನ್ನು ಮಂಡಿಸಿ ರುತ್ತಾರೆ! ಮೇಲ್ನೋಟಕ್ಕೆ ಇದೊಂದು ಪೊಲಿಟಿಕಲ್ ಗಿಮಿಕ್ ಎನ್ನುವುದು ಈಗಾಗಲೇ ಸಾಬೀತಾಗಿದೆ ಎಂದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾ ಗ್ಯಾರೆಂಟಿ ಯೋಜನೆಯ ಜಿಲ್ಲಾಧ್ಯಕ್ಷರಾದ ಶಿವಣ್ಣ ಗಂಜಿಗಟ್ಟೆ, ಡಿಸಿಸಿನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮೈಲಾರಪ್ಪ, ಉಪಾಧ್ಯಕ್ಷರಾದ ರವಿಕುಮಾರ್, ಮುದಾಸಿರ್, ನಗರಸಭೆಯ ಮಾಜಿ ಸದಸ್ಯರಾದ ಮೀನಾಕ್ಷಿ, ಮಹಿಳಾ ಕಾರ್ಯಕರ್ತರಾದ ಮೊದಲ ಪರಿಯಾರ್, ಭಾರತಮ್ಮ, ಅರುಣ್, ಗೀತಮ್ಮ, ರಾಧಮ್ಮ, ಸಂದೀಪ್ ಸೇರಿದಂತೆ ಇತರರು ಭಾಗವಹಿಸಿದ್ದರು. ಇದಕ್ಕೂ ಮುನ್ನಾ ಡಿಸಿಸಿ ಕಚೇರಿಯ ಮಂಭಾಗದಲ್ಲಿ ಮಹಿಳಾ ಮೀಸಲಾತಿಯನ್ನು 33% ತಕ್ಷಣ ಜಾರಿಗೆ ತರಲು ಪಕ್ಷದ ಕಾರ್ಯಕರ್ತರು, ಸಾರ್ವಜನಿಕರಿಂದ ಸಹಿ ಸಂಗ್ರಹಣೆ ಮಾಡಲಾಯಿತು.

Leave a Reply

Your email address will not be published. Required fields are marked *