ಏಪ್ರಿಲ್ 30ರಿಂದ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ-ಸಾಂಸ್ಕೃತಿಕ ಶಿಬಿರ:6ರಿಂದ 9ನೇ ತರಗತಿ ಮಕ್ಕಳಿಗೆ ಅವಕಾಶ-ಯೋಗೀಶ್ ಸಹ್ಯಾದ್ರಿ.

ಚಿತ್ರದುರ್ಗ :

ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕೌಶಲ್ಯ ಬೆಳೆಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಂಯುಕ್ತಾಶ್ರಯದಲ್ಲಿ ಈ ವರ್ಷ ತುಮಕೂರಿನಲ್ಲಿ ಮಕ್ಕಳಿಗಾಗಿ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ, ಸಾಂಸ್ಕೃತಿಕ ಶಿಬಿರ ಆಯೋಜಿಸಲಾಗಿದ್ದು, ಚಿತ್ರದುರ್ಗ ಜಿಲ್ಲೆಯಿಂದ ಸಹ ಆಸಕ್ತ ವಿದ್ಯಾರ್ಥಿಗಳು ಭಾಗವಹಿಸಬಹುದು ಎಂದು ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಯೋಗೀಶ್ ಸಹ್ಯಾದ್ರಿ ತಿಳಿಸಿದ್ದಾರೆ.

ತುಮಕೂರಿನ ಕೊರಟಗೆರೆ ತಾಲ್ಲೂಕಿನ ಶ್ರೀ ಕ್ಷೇತ್ರ ಸಿದ್ಧರಬೆಟ್ಟದಲ್ಲಿ ಏಪ್ರಿಲ್ 30 ರಿಂದ ಮೇ 02 ರ ವರೆಗೆ ಮೂರು ದಿನಗಳ ಕಾಲ ಶಿಬಿರ ನಡೆಯಲಿದೆ. ನಾಡಿನ ಖ್ಯಾತ ಸಾಹಿತಿಗಳು, ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ಮಕ್ಕಳಿಗೆ ಸಾಹಿತ್ಯ, ಸಂಸ್ಕೃತಿ, ಕಲೆ ಯೋಗ, ಚಾರಣ, ಚಿತ್ರ ಕಲೆ, ಜಾನಪದ, ಸಂಗೀತ, ವಿಜ್ಞಾನ, ಭಾಷೆ ಹಾಗೂ ನಾಟಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತರಬೇತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

6 ನೇ ತರಗತಿಯಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಇರಲಿದೆ. ಮಕ್ಕಳು ಲಘು ಹೊದಿಕೆ, ಹಾಸಿಗೆ, ತಟ್ಟೆ, ಲೋಟ ಹಾಗೂ ದಿನಬಳಕೆಯ ವಸ್ತುಗಳನ್ನು ಸ್ವತಃ ತರಬೇಕು.

ಚಿತ್ರದುರ್ಗ ಜಿಲ್ಲೆಯಿಂದ ಭಾಗವಹಿಸಲು ಆಸಕ್ತಿ ಇರುವ ವಿದ್ಯಾರ್ಥಿಗಳು ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಯೋಗೀಶ್ ಸಹ್ಯಾದ್ರಿ (9972240239), ಉಪಾಧ್ಯಕ್ಷ ಬಿ. ವಿಜಯ್ ಕುಮಾರ್ (96867 24546), ಕಾರ್ಯದರ್ಶಿ ಮಾರುತಿ ನಾಯ್ಕ್ (9986336164) ಇವರನ್ನು ಸಂಪರ್ಕಿಸಿ ಹೆಸರುಗಳನ್ನು ನೋಂದಾಯಿಸಬಹುದು ಎಂದು ಮಸಾಪ ಜಿಲ್ಲಾಧ್ಯಕ್ಷ ಯೋಗೀಶ್ ಸಹ್ಯಾದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *