ಚಿತ್ರದುರ್ಗದ ನಾಗರಾಜ ಪಿ.ಸಿ.ಗೆ ಪಿಎಚ್‌ಡಿ ಗೌರವ – ಕಾಡುಗೊಲ್ಲರ ಇತಿಹಾಸದ ಮಹತ್ವದ ಸಂಶೋಧನೆ.

ವರದಿ ಮತ್ತು ಪೋಟೋ ಕೃಪೆ, ಸುರೇಶ್ ಪಟ್ಟಣ್

ಚಿತ್ರದುರ್ಗ ಏ. 29

ಹೊಸದುರ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನಾಗರಾಜ ಪಿ.ಸಿ.ರವರಿಗೆ“ಕಾಡುಗೊಲ್ಲರ ಐತಿಹಾಸಿಕ ಮತ್ತು ಸಾಂಸ್ಕøತಿಕ ಅಧ್ಯಯನ (ವಿಶೇಷವಾಗಿ ಚಿತ್ರದುರ್ಗ ಜಿಲ್ಲೆಯನ್ನು ಅನುಲಕ್ಷಿಸಿ)” ಎಂಬ ವಿಷಯ ಕುರಿತು ಸಂಶೋಧನೆ ನಡೆಸಿ ಮಂಡಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ದೊರೆತಿದೆ.

ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಆವಿನಹಟ್ಟಿಯ ಪೂಜಾರಿ ಚಿಕ್ಕಣ್ಣ ಹಾಗೂ ಶ್ರೀಮತಿ ಮೀನಾಕ್ಷಮ್ಮ ದೇವಿರಮ್ಮ ದಂಪತಿಗಳ ಪುತ್ರರಾದ ನಾಗರಾಜ ಪಿ.ಸಿ. ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಡಾಕ್ಟರ್ ಆಫ್ ಫಿಲಾಫಿ (ಪಿಎಚ್.ಡಿ). ಪದವಿ ಪಡೆದಿದ್ದಾರೆ. ಇವರು ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ಇವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ ಇಲ್ಲಿ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಪ್ರೊಪೆಸರ್.ಅನಂತ ಎಲ್ ಝಂಡೇಕರ್ ಅವರ ಮಾರ್ಗದರ್ಶನದಲ್ಲಿ HISTORICAL AND CULTURAL STUDY OF KADUGOLLAS ( With Special Reference to the Chitradurga District ) “ಕಾಡುಗೊಲ್ಲರ ಐತಿಹಾಸಿಕ ಮತ್ತು ಸಾಂಸ್ಕøತಿಕ ಅಧ್ಯಯನ (ವಿಶೇಷವಾಗಿ ಚಿತ್ರದುರ್ಗ ಜಿಲ್ಲೆಯನ್ನು ಅನುಲಕ್ಷಿಸಿ)” ಎಂಬ ವಿಷಯ ಕುರಿತು ಸಂಶೋಧನೆ ನಡೆಸಿ ಮಂಡಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ದೊರೆತಿದೆ. ನಾಗರಾಜ ಪಿ.ಸಿ. ಅವರ ಈ ಸಾಧನೆ ಕುಟುಂಬದವರಿಗೆ, ಸ್ನೇಹಿತರಿಗೆ ಹಾಗೂ ಕಾಡುಗೊಲ್ಲ ಸಮುದಾಯಕ್ಕೆ ಗೌರವ ತಂದುಕೊಟ್ಟಿದೆ.

ಇವರ ಮುಂದಿನ ಸಂಶೋಧನಾ ಜೀವನ ಇನ್ನಷ್ಟು ಉನ್ನತಿಗೇರಲಿ ಎಂದು ಕುಟುಂಬದವರು, ಕಾಲೇಜಿನ ಪ್ರಾಚಾರ್ಯರು, ಸಹದ್ಯೋಗಿಗಳು, ಸ್ನೇಹಿತರು ಹಾಗೂ ಕಾಡುಗೊಲ್ಲ ಸಮುದಾಯ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *