ಚಿತ್ರದುರ್ಗದ ಬಳಿ ಭೀಕರ ಅಪಘಾತ: ಲಾರಿಗೆ ಕಾರು ಡಿಕ್ಕಿ – ಚಾಲಕ ಸ್ಥಳದಲ್ಲೇ ಸಾವು

ಚಿತ್ರದುರ್ಗ ಏ. 30

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್


ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದು ಓರ್ವ ಮೃತಪಟ್ಟ ಘಟನೆ ಇಂದು ಬೆಳಗಿನ ಜಾವ 5 :30 ರ ಸುಮಾರಿಗೆ ಬೊಗಳೇರಹಟ್ಟಿ ಬಳಿ ನಡೆದಿದೆ. 


ಚಿತ್ರದುರ್ಗ ತಾಲ್ಲೂಕಿನ ಬೊಗಳೇರಹಟ್ಟಿ ಬಳಿ ಘಟನೆ ನಡೆದಿದ್ದು ಕಾರಿನ ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯನ್ನು ಚಿತ್ರದುರ್ಗ ಮೂಲದ ಕೃತಿಕ್ (27 ವರ್ಷ) ಎಂದು ಗುರುತಿಸಲಾಗಿದೆ. 



ಹೊಸಪೇಟೆ ಕಡೆಯಿಂದ ಚಿತ್ರದುರ್ಗದ ಕಡೆ ಬರುತ್ತಿದ್ದು ನಿಲ್ಲಿಸಿದ್ದ ಎಥೆನಾಲ್ ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕಾರು ಸಂಪೂರ್ಣ ಜಖಂ ಗೊಂಡಿದ್ದು ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಇನ್ನೂ ಇಳಕಲ್‍ನಿಂದ ಚಿತ್ರದುರ್ಗಕ್ಕೆ ಕಾರು ಬರುತ್ತಿದ್ದು ಈ ವೇಳೆ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಎಥೆನಾಲ್ ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ತುರುವನೂರು ಠಾಣಾ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಖರಣ ದಾಖಲಿಸಿಕೊಂಡಿದ್ದಾರೆ


Leave a Reply

Your email address will not be published. Required fields are marked *