ICSE ಫಲಿತಾಂಶದಲ್ಲಿ 100% ಸಾಧನೆ: ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳು.


ಚಿತ್ರದುರ್ಗ, ಏ.30: ನಗರದ ಪ್ರತಿಷ್ಠಿತ ಶಾಲೆಯಾದ ವಿದ್ಯಾ ವಿಕಾಸ್ ICSE ಶಾಲೆ 2025-26ನೇ ಸಾಲಿನ 10ನೇ ತರಗತಿ ICSE ಬೋರ್ಡ್ ಪರೀಕ್ಷೆಯಲ್ಲಿ ಶೇಕಡಾ 100% ಫಲಿತಾಂಶ ಸಾಧಿಸಿ ಮಹತ್ವದ ಸಾಧನೆ ಮಾಡಿದೆ.

ಈ ವರ್ಷ ಪರೀಕ್ಷೆಗೆ ಹಾಜರಾದ ಒಟ್ಟು 43 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು, ಶಾಲೆಯ ಶಿಕ್ಷಣ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ. ಇವರಲ್ಲಿ 16 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ (85% ಕ್ಕಿಂತ ಹೆಚ್ಚು ಅಂಕ), 26 ವಿದ್ಯಾರ್ಥಿಗಳು ಪ್ರಥಮ ದರ್ಜೆ (60%–84%) ಹಾಗೂ 1 ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ (50% ಮೇಲ್ಪಟ್ಟು) ಉತ್ತೀರ್ಣರಾಗಿದ್ದಾರೆ.


ವಿಶೇಷವಾಗಿ, ವಿದ್ಯಾರ್ಥಿನಿ ಶ್ರೀಶಾ ಎಸ್ ರೆಡ್ಡಿ ಅವರು ಶೇಕಡಾ 97.40 ಅಂಕ ಗಳಿಸಿ ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ಸಾಧನೆಗೆ ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಸಹಕಾರ ಪ್ರಮುಖ ಕಾರಣವೆಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.


ಶಾಲೆಯ ಪ್ರಾಂಶುಪಾಲರಾದ ಬಸವರಾಜಯ್ಯ ಅವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡಲು ಪ್ರೇರಣೆ ನೀಡಿದರು.

Leave a Reply

Your email address will not be published. Required fields are marked *