ಚಿತ್ರದುರ್ಗ ಮೇ. 12
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಮಾಲತೇಶ್ ಮುದ್ದಜ್ಜಿ ಹಾಗೂ ಕಾರ್ಯದರ್ಶಿ ಆರ್.ಶ್ರೀನಿವಾಸ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಿತ್ರದುರ್ಗ ಜಿಲ್ಲಾ ಶಾಖೆವತಿಯಿಂದ ಕರ್ನಾಟಕ ರಾಜ್ಯಸರ್ಕಾರಿ ನೌಕರರ ಮಕ್ಕಳ 2026 ಸಾಲಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ 2026ನೇ ಸಾಲಿನ ಎಸ್,ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಔಟಿಟiಟಿe ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು https://powermedia.info ಲಿಂಕ್ ಮುಖಾಂತರ ಮೇ. 25ರ ಒಳಗಾಗಿ ಸಲ್ಲಿಸುವುದು. ವಿದ್ಯಾರ್ಥಿಯು 2026ರ ಎಸ್,ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. ನೌಕರರ ಸಂಘದ ಸದಸ್ಯತ್ವ ಹೊಂದಿರಬೇಕು. ಸಂಘದಿಂದ ನಿಗದಿಪಡಿಸಿರುವ ನಮೂನೆಯಲ್ಲಿ ಜಿಲ್ಲಾ, ತಾಲೂಕು ಅಥವಾ ಯೋಜನಾ ಶಾಖೆ ಅಧ್ಯಕ್ಷರಿಂದ ಸೇವಾ ದೃಢೀಕರಣ ಪತ್ರವನ್ನು ದೃಢೀಕರಿಸಿರಬೇಕು. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ. ಔಟಿಟiಟಿe ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEANEWSYOUTUBE ಚಾನಲ್‍ಗೆ ಭೇಟಿ ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧ್ಯಕ್ಷರಾದ ಮಾಲತೇಶ ಮುದ್ದಜ್ಜಿ ಮೊ : ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀನಿವಾಸ.ಆರ್ ಮೊ: 9964295532ರನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಮಾಲತೇಶ್ ಮುದ್ದಜ್ಜಿ ತಿಳಿಸಿದ್ದಾರೆ.

