ಚಿತ್ರದುರ್ಗ ಮೇ, 15:
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಸರಸ್ವತಿ ಎಜುಕೇಶನ್ ಸೊಸೈಟಿ, ಸರಸ್ವತಿ ಕಾನೂನು ಕಾಲೇಜು ಆಶ್ರಯದಲ್ಲಿ ಮೇ. 16ರ ಶನಿವಾರ ಬೆಳೀಗ್ಗೆ 10 ಗಂಟೆಗೆ “ಲಿಂಗ ಆಧಾರಿತ ಹಿಂಸಾಚಾರವನ್ನು ಎದುರಿಸುವುದು: ಸುರಕ್ಷತೆ ಮತ್ತು ನ್ಯಾಯಕ್ಕಾಗಿ ತಂತ್ರಗಳು” ಕುರಿತು ಒಂದು ದಿನದ ಬಹು-ಶಿಸ್ತಿನ ರಾಷ್ಟ್ರೀಯ ಸಮ್ಮೇಳನವನ್ನು ಕಾಲೇಜಿನ ಡೈಮಂಡ್ ಜ್ಯೂಬಿಲಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪ್ರೊ. (ಡಾ.) ಎಂ.ಎಸ್. ಸುಧಾದೇವಿ ತಿಳಿಸಿದ್ದಾರೆ.
ಸಮ್ಮೇಳನವನ್ನು ಹುಬ್ಬಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ಕುಪತಿಗಳಾದ ಪ್ರೊ. (ಡಾ.) ಸಿ. ಬಸವರಾಜು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸರಸ್ವತಿ ಎಜುಕೇಶನ್ ಸೊಸೈಟಿಯ ಅಧ್ಯಕ್ಷರು, ರಾಜ್ಯಸಭಾ ಮಾಜಿ ಸದಸ್ಯರಾದ ಹೆಚ್,ಹನುಮಂತಪ್ಪರವರು ವಹಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಪಶ್ಚಿಮ ಬಂಗಾಳ ರಾಷ್ಟ್ರೀಯ ನ್ಯಾಯ ವಿಜ್ಞಾನ ವಿಶ್ವವಿದ್ಯಾಲಯದ ಕಾನೂನು ಪ್ರಾಧ್ಯಾಪಕರಾದ ಪ್ರೊ. (ಡಾ.) ಶ್ರೀನಿವಾಸಲು. ಎನ್.ಎಸ್. ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರಿನ ಮುಕ್ತಗಂಗೋತ್ರಿಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಮಧುರ. ಎ.ಎಸ್. ಸರಸ್ವತಿ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷರು, ಹಿರಿಯ ವಕೀಲರಾದ ಫಾತ್ಯರಾಜನ್, ಕಾರ್ಯದರ್ಶಿ, ಶ್ರೀಮತಿ ಡಿ.ಕೆ. ಶೀಲಾ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11.30 ರಿಂದ ನಡೆಯಲಿರುವ ಮೊದಲನೇ ವಿಚಾರ ಗೋಷ್ಟಿಯ ಅಧ್ಯಕ್ಷತೆಯನ್ನು ಕೆ.ಎಲ್.ಇ. ಸೊಸೈಟಿಯ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. (ಡಾ.) ಜೆ.ಎಂ. ಮಲ್ಲಿಕಾರ್ಜುನಯ್ಯ ವಹಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾದ ಕಾನೂನು ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾ ಪಕರು, ವಿಶ್ವವಿದ್ಯಾಲಯ ಕಾನೂನು ಕಾಲೇಜು, ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. (ಡಾ.) ವಿ. ಸುದೇಶ್ರವರು ಅಸ್ತಿತ್ವದಲ್ಲಿರುವ ಕಾನೂನುಗಳ ಪರಿಣಾಮಕಾರಿತ್ವ ಬಗ್ಗೆ ಹಾಗೂ ರಾಷ್ಟ್ರೀಯ ಕಾನೂನು ಶಾಲೆಯ ಕಾನೂನು ಪ್ರಾಧ್ಯಾಪಕರಾದ ಪ್ರೊ. (ಡಾ.) ಸಾಯಿರಾಮ್ ಭಟ್ರವರು “ಲಿಂಗ ಆಧಾರಿತ ಹಿಂಸಾಚಾರಕ್ಕೆ ಕಾನೂನು ನ್ಯಾಯ ರಕ್ಷಣೆ“ಯ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಮಧ್ಯಾಹ್ನ 2.30 ರಿಂದ ನಡೆಯಲಿರುವ ಎರಡನೇ ವಿಚಾರ ಗೋಷ್ಟಿಯ ಅಧ್ಯಕ್ಷತೆಯನ್ನು ಹಾಸನ ಹೊಳೆನರಸಿಗೂರಿನ ಸರಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರು, ಡಾ.ಎಂ.ಕೆ. ಮಾಟೊಳ್ಳಿ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ದಾವಣಗೆರೆ ಜಿ.ಎಂ. ವಿಶ್ವವಿದ್ಯಾಲಯದ ಜಿ.ಎಂ. ಕಾನೂನು ಕಾಲೇಜಿನ ನಿರ್ದೇಶಕರಾದ (ಡಾ.) ಬಿ.ಎಸ್. ರೆಡ್ಡಿ ಹಾಗೂ ಮೈಸೂರು ವಿಶ್ವವಿದ್ಯಾಲಯದ ಕಾನೂನು ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಡೀನ್ ಮತ್ತು ಪ್ರಾಧ್ಯಾಪಕರಾದ ಪ್ರೊ. (ಡಾ.). ಟಿ.ಆರ್. ಮಾರುತಿ ಉಪನ್ಯಾಸ ನೀಡಲಿದ್ದಾರೆ.

