Union Bank of India ವತಿಯಿಂದ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದ್ದು, ದೇಶದಾದ್ಯಂತ ಒಟ್ಟು 1,865 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ಪದವೀಧರರಿಗೆ ಇದು ಉತ್ತಮ ಅವಕಾಶವಾಗಿದೆ. ಕರ್ನಾಟಕಕ್ಕೂ ಗಮನಾರ್ಹ ಸಂಖ್ಯೆಯ ಹುದ್ದೆಗಳು ಮೀಸಲಾಗಿವೆ.ಕರ್ನಾಟಕಕ್ಕೆ 131 ಹುದ್ದೆಗಳುಈ ನೇಮಕಾತಿಯಲ್ಲಿ ಕರ್ನಾಟಕ ರಾಜ್ಯಕ್ಕೆ 131 ಹುದ್ದೆಗಳನ್ನು ಮೀಸಲಿಡಲಾಗಿದೆ. ರಾಜ್ಯದ ಅಭ್ಯರ್ಥಿಗಳು ಕನ್ನಡ ಭಾಷೆಯನ್ನು ಓದಲು, ಬರೆಯಲು ಮತ್ತು ಅರ್ಥೈಸಿಕೊಳ್ಳಲು ಸಾಮರ್ಥ್ಯ ಹೊಂದಿರಬೇಕು ಎಂದು ಬ್ಯಾಂಕ್ ತಿಳಿಸಿದೆ.
ಅರ್ಹತೆ ಏನು?
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಆದರೆ ಪದವಿ ಪೂರ್ಣಗೊಂಡು ನಾಲ್ಕು ವರ್ಷಕ್ಕಿಂತ ಹೆಚ್ಚು ಕಾಲ ಕಳೆದಿದ್ದರೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ವಯೋಮಿತಿ
ಕನಿಷ್ಠ ವಯಸ್ಸು: 20 ವರ್ಷ
ಗರಿಷ್ಠ ವಯಸ್ಸು: 28 ವರ್ಷ
ಮೀಸಲಾತಿ ವರ್ಗಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
ಪ.ಜಾ / ಪ.ಪಂ ಅಭ್ಯರ್ಥಿಗಳಿಗೆ: 5 ವರ್ಷ
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳ ಆಯ್ಕೆ ಆನ್ಲೈನ್ ಪರೀಕ್ಷೆ ಹಾಗೂ ಸ್ಥಳೀಯ ಭಾಷಾ ಪರೀಕ್ಷೆಯ ಮೂಲಕ ನಡೆಯಲಿದೆ. ಆಯ್ಕೆಯಾದವರಿಗೆ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ತರಬೇತಿ ನೀಡಲಾಗುತ್ತದೆ.
ಮಾಸಿಕ ಗೌರವಧನಪ್ರಶಿಕ್ಷಣ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಪ್ರದೇಶಾವಾರಿಯಾಗಿ ಮಾಸಿಕ ಸ್ಟೈಪೆಂಡ್ ನೀಡಲಾಗುತ್ತದೆ.
ಗ್ರಾಮೀಣ ಪ್ರದೇಶ: ₹15,000
ನಗರ ಪ್ರದೇಶ: ₹18,000
ಮೆಟ್ರೋ ನಗರಗಳು: ₹20,000
ಅರ್ಜಿ ಶುಲ್ಕ
ಸಾಮಾನ್ಯ / ಒಬಿಸಿ ಪುರುಷ ಅಭ್ಯರ್ಥಿಗಳು: ₹944
ಸಾಮಾನ್ಯ / ಒಬಿಸಿ ಮಹಿಳಾ ಅಭ್ಯರ್ಥಿಗಳು: ₹708
ಪ.ಜಾ / ಪ.ಪಂ ಅಭ್ಯರ್ಥಿಗಳು: ₹236
ಅರ್ಜಿ ಸಲ್ಲಿಕೆ ದಿನಾಂಕ
ಆನ್ಲೈನ್ ಅರ್ಜಿ ಪ್ರಕ್ರಿಯೆ ಏಪ್ರಿಲ್ 29ರಿಂದ ಆರಂಭವಾಗಿದ್ದು, ಮೇ 19ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹೇಗೆ ಅರ್ಜಿ ಸಲ್ಲಿಸಬೇಕು?
ಅಭ್ಯರ್ಥಿಗಳು BFSI SSC Portal ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ನೇಮಕಾತಿ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ವೆಬ್ಸೈಟ್ಗೆ unionbankofindia.co.in ಭೇಟಿ ನೀಡಿ.