ವೀರಶೈವ ಸಮಾಜದಿಂದ ಪ್ರತಿಭಾ ಪುರಸ್ಕಾರ: SSLC ಮತ್ತುPUC ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನ.

ಚಿತ್ರದುರ್ಗ ಮೇ. 20

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗದ ವೀರಶೈವ ಸಮಾಜದವತಿಯಿಂದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನ ಮಾಡಿದೆ ಎಂದು ಕಾರ್ಯದರ್ಶಿ ಪಿ.ವೀರೇಂದ್ರಕುಮಾರ್ ತಿಳಿಸಿದ್ದಾರೆ.

2025-26ರ ಸಾಲಿನಲ್ಲಿ ವಿದ್ಯಾಭ್ಯಾಸ ಮಾಡಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಶೇಕಡಾ 90% ಮೇಲ್ಪಟ್ಟು ಅಂಕೆಗಳಿಸಿದ ಚಿತ್ರದುರ್ಗ ತಾಲ್ಲೂಕಿನ ವೀರಶೈವ/ಲಿಂಗಾಯಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ವೀರಶೈವ ಸಮಾಜವು ತೀರ್ಮಾನಿಸಿದೆ.

ಈ ಹಿನ್ನಲೆಯಲ್ಲಿ 31-05-2026 ರೊಳಗಾಗಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30, ಸಂಜೆ 5.00 ರಿಂದ 8.30ರವರೆಗೆ ವೀರಶೈವ ಸಮಾಜದ ವ್ಯವಸ್ಥಾಪಕರಲ್ಲಿ ತಾವು ಅಭ್ಯಾಸ ಮಾಡಿದ ಪ್ರೌಢಶಾಲೆ/ಕಾಲೇಜು ಮುಖ್ಯೋಪಾಧ್ಯಾಯರು ಅಥವಾ ಪ್ರಾಂಶುಪಾಲರಿಂದ ದೃಢೀಕರಿಸಿದ ಅಂಕಪಟ್ಟಿ ಮತ್ತು ಜಾತಿ ದೃಢೀಕರಣ ಪತ್ರದೊಂದಿಗೆ ಚಿತ್ರದುರ್ಗ ನಗರದ ಶ್ರೀ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿರುವ ವೀರಶೈವ ಸಮಾಜದ ಕಛೇರಿಗೆ ಅರ್ಜಿ ಸಲ್ಲಿಸಲು ವೀರಶೈವ ಸಮಾಜ ಕಾರ್ಯದರ್ಶಿ ಪಿ. ವೀರೇಂದ್ರಕುಮಾರ್ ತಿಳಿಸಿದ್ದು ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕರು : 9986295285 ಇವರನ್ನು ಸಂಪರ್ಕ ಮಾಡಬಹುದಾಗಿದೆ.

Leave a Reply

Your email address will not be published. Required fields are marked *