ಬಗರ್ ಹುಕುಂ ಸಾಗುವಳಿದಾರರ ಹೋರಾಟಕ್ಕೆ ಸ್ಪಂದಿಸಿದ ಡಿಸಿಸಿ ಅಧ್ಯಕ್ಷ ತಾಜ್‌ಪೀರ್: ಸಮಸ್ಯೆ ಬಗೆಹರಿಸುವ ಭರವಸೆ.

ಚಿತ್ರದುರ್ಗ ಮೇ. 21

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ತಾಲ್ಲೂಕಿನಲ್ಲಿ ಬಗರ್ ಹುಕುಂ ಸಮಿತಿ ಇದ್ದು ಇದಕ್ಕೆ ಶಾಸಕರು ಅಧ್ಯಕ್ಷರಾಗಿರುತ್ತಾರೆ ನಿಮ್ಮ ಸಮಸ್ಯೆಯನ್ನು ಅವರ ಗಮನಕ್ಕೆ ತಂದು ಸಾಧ್ಯವಾದಷ್ಟು ಬಗೆಹರಿಸುತ್ತೇನೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಎಂ.ಕೆ.ತಾಜ್‍ಪೀರ್ ಪ್ರತಿಭಟನೆ ನಿರಂತರಿಗೆ ಭರವಸೆಯನ್ನು ನೀಡಿದರು.

ಭೂ ಮಂಜೂರಾತಿಗಾಗಿ ಕಳೆದ ಹತ್ತು ದಿನಗಳಿಂದಲೂ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಬಗರ್ ಹುಕುಂ ಸಾಗುವಳಿದಾರರು ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿ ಪ್ರತಿಭಟನಾಕಾರರನು ಉದ್ದೇಶಿಸಿ ಮಾತನಾಡಿದ ಅವರು, ನೀವುಗಳು ಇಲ್ಲಿ ಪ್ರತಿಭಟನೆಗೆ ಕುಳಿತ್ತಿರುವ ವಿಷಯ ನಮಗೆ ಗೊತ್ತಿಲ್ಲ ಇಲ್ಲಿ ಪ್ರತಿ ದಿನ ಪ್ರತಿಭಟನೆ ಧರಣಿಗಳು ನಡೆಯುತ್ತಿರುವ ಈ ಹಿನ್ನಲೆಯಲ್ಲಿ ನಾವು ತಲೆ ಕೆಡಿಸಿಕೊಂಡಿರಲಿಲ್ಲ ಆದರೆ ನಿನ್ನೆ ನಮ್ಮ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಲಾಗಿದೆ ಎಂದು ಗೋತ್ತಾಗಿದೆ ಈ ಹಿನ್ನಲೆಯಲ್ಲಿ ಇಂದು ನಾವೇ ಬಂದು ನಿಮ್ಮ ಮನವಿಯನ್ನು ಆಲಿಸಲಾಗುತ್ತಿದೆ. ಭೂಮಿ ಹಕ್ಕು ಪತ್ರಕ್ಕಾಗಿ ಹತ್ತು ದಿನಗಳಿಂದಲೂ ಹೋರಾಟ ನಡೆಸುತ್ತಿದ್ದರೂ ಯಾವ ಶಾಸಕರು ನಮ್ಮ ಬಳಿ ಬಂದು ಅಹವಾಲುಗಳನ್ನು ಕೇಳುತ್ತಿಲ್ಲ. ಎಂದು ದೂರಲಾಗಿದೆ ಇದರ ಬಗ್ಗೆ ನಮಗೆ ಮಾಹಿತಿ ಇಲ್ಲದಿರುವುದರಿಂದ ಈ ರೀತಿಯಾಗಿದೆ ಎಂದರು.

ನಿಮ್ಮ ಪ್ರತಿಭಟನೆಯ ಬಗ್ಗೆ ನಮಗೆ ಮಾಹಿತಿ ಇದ್ದಿದ್ದೆರೆ ಮೊನ್ನೆ ನಮ್ಮ ಕಚೇರಿಗೆ ಶಾಸಕರು ಬಂದಿದ್ದರು ಅವರನ್ನು ಇಲ್ಲಿಗೆ ಕರೆ ತರವುದರ ಮೂಲಕ ನಿಮ್ಮ ಸಮಸ್ಯೆಯನ್ನು ಆಲಿಸಲಿ ವ್ಯವಸ್ಥೆಯನ್ನು ಮಾಡುತ್ತೀದ್ದೇವೆ ಎಂದ ಅವರು ರಾಜ್ಯದ ಪ್ರತಿ ತಾಲ್ಲೂಕಿನಲ್ಲಿಯೂ ಸಹಾ ಬಗರ್ ಹುಕುಂ ಸಮಿತಿ ಇದ್ದು ಇದಕ್ಕೆ ಶಾಸಕರು ಅಧ್ಯಕ್ಷರಾಗಿರುತ್ತಾರೆ ನಿಮ್ಮ ಸಮಸ್ಯೆಯನ್ನು ಅವರ ಗಮನಕ್ಕೆ ತಂದು ಸಾಧ್ಯವಾದಷ್ಟು ಬಗೆಹರಿಸುತ್ತೇನೆ ನಿಮ್ಮ ಮನವಿಯನ್ನು ನನಗೆ ಕೂಡಿ ಇದರ ಬಗ್ಗೆ ಅವರಲ್ಲಿ ಮಾತನಾಡುತ್ತೇನೆ ಎಂದು ತಾಜ್ ಪೀರ್ ತಿಳಿಸಿದರು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಸಂಚಾಲಕ ಕುಮಾರ್ ಸಮತಳ ಮಾತನಾಡಿ, ಜಿಲ್ಲೆಯ ಬಗರ್ ಹುಕುಂ ಸಾಗುವಳಿದಾರರು ಭೂಮಿ ಹಕ್ಕು ಪತ್ರಕ್ಕಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದರೂ ಜಿಲ್ಲಾಡಳಿತ ಸ್ಥಳಕ್ಕೆ ಬಂದು ಮನವಿಯನ್ನು ಆಲಿಸುತ್ತಿಲ್ಲ ವಿಧಾನಸಭೆ ಚುನಾವಣೆ ಪೂರ್ವ ಹಾಗೂ ನಂತರದಲ್ಲಿ ಭೂಮಿ ಹಕ್ಕು ಪತ್ರ ನೀಡುವಂತೆ ರಾಜ್ಯ ಸರ್ಕಾರವನ್ನು ಕೇಳಿಕೊಂಡಿದ್ದೇವೆ. ಜಿಲ್ಲೆಯಲ್ಲಿ ಲಕ್ಷಾಂತರ ಬಗರ್‍ಹುಕುಂ ಸಾಗುವಳಿದಾರರಿದ್ದಾರೆ. ಅನೇಕ ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದರೂ ಇನ್ನು ಹಕ್ಕುಪತ್ರ ನೀಡಿಲ್ಲವೆನ್ನುವುದಾದರೆ ಆಳುವ ಸರ್ಕಾರಗಳು ಯಾರ ಪರವಾಗಿದೆ ಎನ್ನುವುದೇ ನಿಗೂಢವಾಗಿದೆ ಎಂದರು.

ಕಾಯ್ದೆ ಕಾನೂನು ನೆಪದಲ್ಲಿ ಬಗರ್ ಹುಕುಂ ಮತ್ತು ಅಕ್ರಮ ಸಕ್ರಮ ಅರ್ಜಿಗಳನ್ನು ತಿರಸ್ಕರಿಸುವುದನ್ನು ಕೂಡಲೆ ನಿಲ್ಲಿಸಬೇಕು. ಹೊಟ್ಟೆ ಪಾಡಿಗಾಗಿ ತುಂಡು ಭೂಮಿಗಳನ್ನು ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿರುವವರಿಗೆ ಒನ್ ಟೈಂ ಸೆಟ್ಲಮೆಂಟ್ ಮೂಲಕ ಬಗೆಹರಿಸಿ ಹಕ್ಕುಪತ್ರಗಳನ್ನು ವಿತರಿಸಬೇಕೆಂದು ಕುಮಾರ್ ಸಮತಳ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಸುದರ್ಶನ್, ಮುದಾಸಿರ್, ಲಕ್ಷ್ಮೀಕಾಂತ, ರವಿಕುಮಾರ್, ಮುನೀರಾ ಮಕಾಂದರ್ ಸತ್ಯಪ್ಪ ಮಲ್ಲಾಪುರ, ಹನುಮಂತಪ್ಪ ಗೋನೂರು, ವೆಂಕಟೇಶ್ ಬಚ್ಚಬೋರನಹಟ್ಟಿ, ಅಂಜಿನಪ್ಪ, ಭಾಗವಹಿಸಿದ್ದರು.

Leave a Reply

Your email address will not be published. Required fields are marked *