ಸಮಗ್ರ ಸುದ್ದಿ , ಜೂನ್ 5: ನಗರದ ಪ್ರತಿಷ್ಠಿತ ಸಿಎನ್ಸಿ ಪಿಯು ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆವರಣದಲ್ಲಿ ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಹಸಿರು ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾಲೇಜಿನಲ್ಲಿ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಹಾಗೂ ಪೋಸ್ಟರ್ ಪ್ರೆಸೆಂಟೇಶನ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಡೀನ್ ಡಾ. ಗೋಪಾಲ್, ಪ್ರಾಂಶುಪಾಲರಾದ ಬಿ. ನಾಗರಾಜ್, ಉಪ ಪ್ರಾಂಶುಪಾಲರಾದ ಎಚ್.ಪಿ. ಮಂಜುನಾಥ್ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಸಾರಲಾಯಿತು.