ಚಿತ್ರದುರ್ಗ| ವಿದ್ಯುತ್ ಖಾಸಗೀಕರಣ ಮುಂದುವರಿದರೆ ಉಗ್ರ ಹೋರಾಟ: ಡಾ. ವಾಸುದೇವ ಮೇಟಿ ಬಣದ ಎಚ್ಚರಿಕೆ.

ಚಿತ್ರದುರ್ಗ ಜೂ. 09

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ವಿದ್ಯುತ್ ವಿತರಣಾ ಕಂಪನಿಗಳನ್ನು ಟಾಟಾ ಪವರ್ ಕಂಪನಿಗಳಿಗೆ ನೀಡುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾ|| ವಾಸುದೇವ ಮೇಟಿ ಬಣದಿಂದ ಮಂಗಳವಾರ ಪ್ರತಿಭಟನೆಯನ್ನು ನೆಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಪಾದಯಾತ್ರೆ ಮೂಲಕ ಪ್ರತಿಭಟನೆಯನ್ನು ನಡೆಸಿದ ರೈತರು ದಾರಿಯುದ್ದಕ್ಕೂ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಲಾಯಿತು. ಕರ್ನಾಟಕ ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮಸ್ಕಾಂ ವಿದ್ಯುತ್ ಕಂಪನಿಗಳ 19 ಜಿಲ್ಲೆಗಳ ವಿದ್ಯುತ್ ವಿತರಣಾ ಕಂಪನಿಗಳನ್ನು ವ್ಯವಸ್ಥಿತವಾಗಿ ಖಾಸಗಿ ಕಂಪನಿಯವರಿಗೆ ವಹಿಸುತ್ತಿರುವುದನ್ನು ರೈತ ಸಂಘ ವಿರೋಧಿಸುತ್ತದೆ. ಸಾವಿರಾರು ಕೋಟಿ ಮೌಲ್ಯದ ವಿತರಣಾ ಕಂಪನಿಗಳು, ಉಪಕೇಂದ್ರಗಳು, ಯಂತ್ರೋಪಕರಣ ಬೃಹತ್ ಸೌಕರ್ಯ ಹೊಂದಿರುವ ಸಾರ್ವಜನಿಕ ಆಸ್ತಿ ಆಗಿದ್ದು, ಈಗಿರುವಾಗ ಕಂಪನಿಗಳು ಮತ್ತು ನೌಕರರು ಸಮಪರ್ಕವಾಗಿ ವಿದ್ಯುತ್ ಸರಬರಾಜು ಮಾಡುತ್ತಿದ್ದಾರೆ. ಆದರೂ ಖಾಸಗಿ ಕಂಪನಿಯವರಿಗೆ ವಹಿಸುತ್ತಿರುವುದನ್ನು ಪ್ರಶ್ನೆ ಮಾಡುತ್ತಿದ್ದೇವೆ. ಕೆಲವು ರಾಜ್ಯಗಳಲ್ಲಿ ಖಾಸಗಿ ಕಂಪನಿಗಳು ನಿರ್ವಹಣೆ ಮಾಡಲಾರದೆ ಅರ್ಧದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ದೂರಿದರು.

ಸರ್ಕಾರ ವಿದ್ಯುತ್ ನಿರ್ವಹಣಾ ಕಂಪನಿಗಳು, ಖಾಸಗಿ ಸಂಸ್ಥೆಗಳಿಗೆ ನೀಡಿದರೆ ಖಾಸಗಿ ಕಂಪನಿಗಳು ಸ್ಮಾರ್ಟ್ ಮೀಟರ್‍ಗಳನ್ನು ಹಾಕಿ ಮೊಬೈಲ್ ಕಂಪನಿಗಳವರ ಪೋಸ್ಟ್ ಪೇಯ್ಡ್ ತರಹ ವ್ಯವಸ್ಥೆಗಳನ್ನು ಮಾಡುತ್ತಾರೆ. ರೈತರು ಬಡವರಿಗೆ ಕೂಲಿ ಕಾರ್ಮಿಕರಿಗೆ, ವೃದ್ದರಿಗೆ, ರೈತರ ಐಪಿ ಸೆಟ್‍ಗಳಿಗೆ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಗಳನ್ನು ಇನ್ನು ಮುಂದೆ ರದ್ದಾಗಲಿದೆ. ಈಗಿರುವ ಎಲ್ಲಾ ನೌಕರರು ಕೆಲಸ ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕರ್ನಾಟಕ ಸರ್ಕಾರ ವಿದ್ಯುತ್ ವಿತರಣೆ ಕಂಪನಿಗಳನ್ನು ಖಾಸಗಿಯವರಿಗೆ ವಹಿಸಬಾರದು ಇದನ್ನು ಮುಂದುವರಿಸಲು ಪ್ರಯತ್ನ ಪಟ್ಟರೆ ರಾಜ್ಯಾಧ್ಯಕ್ಷರಾದ ಡಾ.ವಾಸುದೇವ ಮೇಟಿ ನೇತೃತ್ವದಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಮುಂಭಾಗ ಮುಖ್ಯಮಂತ್ರಿಗಳ ಅಣಕು ಶವಯಾತ್ರೆ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾ|| ವಾಸುದೇವ ಮೇಟಿ ಬಣದಿಂದ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಲಾಯಿತು.

ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾ|| ವಾಸುದೇವ ಮೇಟಿ ಬಣದ ಜಿಲ್ಲಾಧಕ್ಷರಾದ ಈ ಎನ್.ಲಕ್ಷ್ಮೀಕಾಂತ ಲಿಂಗಾವರಹಟ್ಟಿ ವಹಿಸಿದ್ದರು. ಇದರಲ್ಲಿ ಮಹಿಳಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಲೋಲಾಕ್ಷಮ್ಮ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾದ ಶ್ರೀಮತಿ ಪವಿತ್ರ, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷರಾದ ಶ್ರೀಮತಿ ಮಂಜುಳ ಕೊಳಹಾಳ್ ಚಳ್ಳಕೆರೆ ತಾಲ್ಲೂಕು ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮೀ .ಟಿ.ಟಿ.ಎಸ್ ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾದ ಕಾಂತರಾಜ್.ಎಸ್ ಮಾಳಪ್ಪನಹಟ್ಟಿಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷರಾದ ನಾಗರಾಜ್ ಚಳ್ಳಕೆರೆ ತಾಲ್ಲೂಕು ಅಧ್ಯಕ್ಷರಾದ ಹೇಮಾರೆಡ್ಡಿ ಕರೀಕೆರೆ, ಜಿಲ್ಲಾ ಕಾರ್ಯದರ್ಶಿ ಸಿ.ಓಂಕಾರಪ್ಪ ಸೇರಿದಂತೆ ಇತರೆ ಪದಾಧಿಕಾರಿಗಳು ಭಾಗವಹಿಸಿದ್ದರು.

Follow the ಸಮಗ್ರ ಸುದ್ದಿ Telegram Channel: https://t.me/SamagraSuddi

ಸಮಗ್ರ ಸುದ್ದಿ channel on WhatsApp:

https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *