ಭಾರತದಲ್ಲಿ ನಿರುದ್ಯೋಗ: ಸಮಸ್ಯೆಯೇ ಅಥವಾ ವ್ಯವಸ್ಥೆಯ ವೈಫಲ್ಯವೇ? ವಿಶೇಷ ಉಪನ್ಯಾಸ ಜೂನ್ 13ರಂದು.

ಸಮಗ್ರ ಸುದ್ದಿ ಜೂನ್ 11: ಕರ್ನಾಟಕ ರಾಜ್ಯ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ನಿವೃತ್ತ ಶಿಕ್ಷಕರ ಒಕ್ಕೂಟ (FUCRTAK)ಚಿತ್ರದುರ್ಗ ಜಿಲ್ಲಾ ಘಟಕ, ರೋಟರಿ ಕ್ಲಬ್ ಚಿನ್ಮೂಲಾದ್ರಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮತ್ತು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಇವರುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ:13.6.2026 ರ ಶನಿವಾರ ಬೆಳಿಗ್ಗೆ 10.30 ಕ್ಕೆ ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಭಾರತದಲ್ಲಿ ನಿರುದ್ಯೋಗಿಗಳು ಆದವರೋ ಇಲ್ಲಾ ಮಾಡಿದವರೋ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಿವೃತ್ತ ಪ್ರಾಧ್ಯಾಪಕರು ಹಾಗೂ FUCRTAK ಅಧ್ಯಕ್ಷರಾದ ಪ್ರೊ.ಟಿ. ಹೆಚ್. ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸುವರು. ರೋಟರಿ ಕ್ಲಬ್ ಚಿನ್ಮೂಲಾದ್ರಿ ಅಧ್ಯಕ್ಷರಾದ ಶ್ರೀಮತಿ ದಿಲ್ ಷಾದ್ ಉನ್ನೀಸಾ ಕಾರ್ಯಕ್ರಮ ಉದ್ಘಾಟಿಸುವರು.

ಹಂಪಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಟಿ. ಆರ್.ಚಂದ್ರಶೇಖರ್ “ಭಾರತದಲ್ಲಿ ನಿರುದ್ಯೋಗ ಒಂದು ಅವಲೋಕನ” ವಿಷಯವಾಗಿ, ನಿವೃತ್ತ ಪ್ರಾಂಶುಪಾಲರು ಹಾಗೂ ಆರ್ಥಿಕ ಚಿಂತಕರು ಆದ ಡಾ.ಜಿ. ಎನ್.ಮಲ್ಲಿಕಾರ್ಜುನಪ್ಪ ಅವರು “ಭಾರತದಲ್ಲಿ ನಿರುದ್ಯೋಗಿಗಳು ಆದವರೋ ಇಲ್ಲಾ ಮಾಡಿದವರೋ” ಎಂಬ ವಿಷಯವಾಗಿ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಿ.ಕೆ.ಶಿವರಶ್ಮಿ ಅಕ್ಕನವರು, ಡಾ.ಕೆ.ಎಂ.ವೀರೇಶ್, ಶ್ರೀ ಚಳ್ಳಕೆರೆ ಯರ್ರಿಸ್ವಾಮಿ ಭಾಗವಹಿಸುವರು ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *