ಚಿತ್ರದುರ್ಗ ತಾಲೂಕು ವೀರಶೈವ ಲಿಂಗಾಯತ ಮಹಾಸಭಾ ವಾಣಿಜ್ಯ ಘಟಕದ ಅಧ್ಯಕ್ಷರಾಗಿ ಡಿ.ಎಂ. ಪ್ರಸನ್ನ ಕುಮಾರ್ ಅವಿರೋಧ ಆಯ್ಕೆ

ಪೋಟೋ ಮತ್ತು ವರದಿ ವೇದಮೂರ್ತಿ ಭರಮಸಾಗರ.

ಚಿತ್ರದುರ್ಗ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಘಟಕದ ಚಿತ್ರದುರ್ಗ ತಾಲೂಕು ಅಧ್ಯಕ್ಷರಾಗಿ ಡಿ.ಎಂ. ಪ್ರಸನ್ನ ಕುಮಾರ್ ಅವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

​ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಹಾಸಭಾದ ಪ್ರಮುಖ ಪದಾಧಿಕಾರಿಗಳ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ತಾಲೂಕಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ರಂಗದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಪ್ರಗತಿ ಹಾಗೂ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಆಯ್ಕೆ ಮಹತ್ವದ್ದಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಯಿತು.

ಗಣ್ಯರ ಉಪಸ್ಥಿತಿ:

ಈ ಸಂದರ್ಭದಲ್ಲಿ ಮಹಾಸಭಾದ ಪ್ರಮುಖರಾದ ಮಹಡಿ ಶಿವಮೂರ್ತಿ, ಆನಂದ್, ರುದ್ರೇಶ್, ಶಶಿಧರ್, ಬಾಬು, ವೀರಭದ್ರಸ್ವಾಮಿ, ಶಿವಾನಂದ್, ಜಯಣ್ಣ, ವೀರೇಶ್ ಹಾಗೂ ಸತೀಶ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದು, ನೂತನ ಅಧ್ಯಕ್ಷರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದರು.

Leave a Reply

Your email address will not be published. Required fields are marked *