ಉಪರಾಷ್ಟ್ರಪತಿ ಸಿ.ಪಿ.ರಾಧಾ ಕೃಷ್ಣನ್ ರವರಿಂದ ಮಾದಾರ ಚೆನ್ನಯ್ಯ ಶ್ರೀಗಳಿಗೆ ಕೆಂಪೇಗೌಡ ಪ್ರಶಸ್ತಿ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ.

ಚಿತ್ರದುರ್ಗ ಜೂ. 28

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಕೆಂಪೇಗೌಡರ 517ನೇ ಜನ್ಮ ದಿನಾಚರಣೆ ಪ್ರಯುಕ್ತ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನೀಡುವ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಚಿತ್ರದುರ್ಗದ ಶ್ರೀ ಗುರು ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಜೀಯವರಿಗೆ ನಿನ್ನೆ ಬೆಂಗಳೂರಿನ ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ.ರಾಧಾ ಕೃಷ್ಣನ್ ಪ್ರಧಾನ ಮಾಡಿದರು. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಿಗೆ 2 ಲಕ್ಷ ರೂ. ನಗದು ನೀಡಿ ಗೌರವಿಸಲಾಯಿತು.  

ಇನ್ಫೋಸಿಸ್ ಸಂಸ್ಥೆಯ ಹಣಕಾಸು ವಿಭಾಗದ ಮಾಜಿ ಮುಖ್ಯಸ್ಥರು ಹಾಗೂ ಅಕ್ಷಯಪಾತ್ರೆ ಯೋಜನೆಯ ಸಹ ಸಂಸ್ಥಾಪಕ ಟಿ.ವಿ.ಮೋಹನದಾಸ್ ಪೈ, ಮತ್ತು ರಾಜ್ಯದ ಅರಣ್ಯ ಇಲಾಖೆಯ ನಿವೃತ್ತ ಕಾರ್ಯದರ್ಶಿ ಗಳಾಗಿ ಸೇವೆ ಸಲ್ಲಿಸಿದ್ದ ಎ.ಸಿ.ಲಕ್ಷ್ಮಣ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಯಿತು. 

ಉಳಿದಂತೆ ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ ಆಡಳಿತ, ಶಿಕ್ಷಣ, ಸಂಸ್ಕೃತಿ, ಕೃಷಿ, ಪತ್ರಿಕೋದ್ಯಮ, ಸಾಹಿತ್ಯ, ಸಂಶೋಧನೆ,-ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಸಾಧನೆ ಮಾಡಿರುವ 15 ಮಂದಿ ಅರ್ಹರನ್ನು ಆಯ್ಕೆ ಸಮಿತಿಯು ಆಯ್ಕೆ ಮಾಡಿದೆ. ಅದರಂತೆ ಎಸ್.ವಿ.ರಂಗನಾಥ್, ಎಚ್.ಎ.ರಂಗನಾಥ್, ಎಂ.ಆರ್.ಜೈಶಂಕರ್, ಬಿ.ಎಂ.ಕೊಕರೆ, ಡಾ.ವಾಮ ದೇವಪ್ಪ, ಕೇಶವ ಆಯ್ಕೆ, ವಿಕ್ರಮ್ ಮುತ್ತಣ್ಣ, ಜಯಪ್ರಕಾಶ್ ಗೌಡ, ರವಿಕುಮಾರ್, ಯಶಸ್ವಿನಿ ಶರ್ಮ, ಪ್ರೇಮಾ ಗಣೇಶ್, ರಶ್ಮಿ ಸಾವಂತ್, ತ್ರಿಸ್ಟಾ ರಾಮಮೂರ್ತಿ, ಧರ್ಮೇಂದ್ರ, ಮಹೇಶ್ ಗೌಡ ಅವರು ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ 

ಕಾರ್ಯಕ್ರಮದಲ್ಲಿ ಶ್ರೀ ನಿರ್ಮಲಾನಂದ ಶ್ರೀಗಳ ಸಾನಿಧ್ಯವಹಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್, ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ವಿ.ಸೋಮಣ್ಣ, ವಿಪಕ್ಷ ನಾಯಕ ಆರ್.ಅಶೋಕ್ ನಾಡ ಪ್ರಭು ಕೆಂಪೇಗೌಡ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ. ಎಂ.ಕೃಷ್ಣೇಗೌಡ, ಶಾಸಕರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ ಭಾಗವಹಿಸಿದ್ದರು. 

Leave a Reply

Your email address will not be published. Required fields are marked *