ಚಿತ್ರದುರ್ಗ ಜೂ. 28
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಆಧ್ಯಾತ್ಮಿಕ ಸಾಧಕ, ಈಶ ಫೌಂಡೇಶನ್ನ ಸ್ಥಾಪಕರಾದ ಸದ್ಗುರು ಶ್ರೀ ಜಗ್ಗಿ ವಾಸುದೇವ್ ಅವರು ಜುಲೈ 1 ರಂದು ಚಿತ್ರದುರ್ಗಕ್ಕೆ ಬೇಟಿ ನೀಡಲಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಹೆಲಿಕಾಫ್ಟರ್ ಮೂಲಕ ಚಿತ್ರದುರ್ಗಕ್ಕೆ ಆಗಮಿಸಿ ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠಕ್ಕೆ ಬೇಟಿ ನೀಡಿ ಪೀಠಾಧ್ಯಕ್ಷರಾದ ಡಾ.ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಜಿಗಳೊಂದಿಗೆ 30 ನಿಮಿಷಗಳ ಕಾಲ ಸೌಹಾರ್ದ ಚರ್ಚೆ ನಡೆಸಲಿದ್ದಾರೆ.
ನಂತರ ಮುರುಘಾಮಠದ ಅನುಭವ ಮಂಟಪ ಸಭಾಂಗಣದಲ್ಲಿ ನಡೆಯುವ “ಶರಣರ ದೃಷ್ಟಿಯಲ್ಲಿ ಯೋಗ ವಿಜ್ಞಾನ” ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ, ಈ ವೇದಿಕೆಯಲ್ಲಿ ಚಿತ್ರದುರ್ಗ ಕಬೀರಾನಂದ ಆಶ್ರಮದ ಶ್ರೀಶಿವಲಿಂಗಾನಂದ ಮಹಾ ಸ್ವಾಮೀಜಿಗಳು ಉಪಸ್ಥಿತರಿರುವರು, ಮುರುಘಾಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಶ್ರೀ ಬಸವಕುಮಾರ ಸ್ವಾಮೀಜಿಗಳ ದಿವ್ಯ ನೇತೃತ್ವದಲ್ಲಿ ಸಮಾರಂಭ ನೆರವೇರಲಿದೆ ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನಿದ್ಯ ವಹಿಸುವರು. ಮುರುಘಾಮಠ ಹಾಗೂ ಜಗ್ಗಿ ವಾಸುದೇವ್ ಅವರ ಅನುಯಾಯಿಗಳು ಸದ್ಭಕ್ತರು, ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಲು ಮನವಿ ಮಾಡಲಾಗಿದೆ.