ಚಿತ್ರದುರ್ಗ ಜೂ. 29
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಗ್ರಾಮಾಂತರ ಪೊಲೀಸ್ ಠಾಣೆ ಅಪರಾಧ ಸಂಖ್ಯೆ : 287/2026ರ ಪ್ರಕರಣದಲ್ಲಿ ಯಾವುದೇ ರಾಜಕೀಯ ಪಕ್ಷ, ವ್ಯಕ್ತಿ ಅಥವಾ ಸಂಘಟನೆ ಒತ್ತಡಕ್ಕೆ ಮಣಿಯದೇ ಸಂಪೂರ್ಣ ನಿಷ್ಪಕ್ಷಪಾತವಾಗಿ, ಪಾರದರ್ಶಕವಾಗಿ ಹಾಗೂ ಕಾನೂನುಬದ್ದವಾಗಿ ಹಾಗೂ ನ್ಯಾಯಸಮ್ಮತ ತನಿಖೆ ನಡೆಸುವಂತೆ ಆಗ್ರಹಿಸಿ ಸೋಮವಾರ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಚಿತ್ರದುರ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ಘಟಕ ಒತ್ತಾಯಿಸಿದೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ : 287/2026ರ ದಾಖಲಾದ ಪ್ರಕರಣವು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಸರ್ಕಾರವು ಸದಾ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಲುವನ್ನು ಹೊಂದಿದೆ. ರೈತರ ಕೃಷಿ ಉತ್ಪನ್ನಗಳ ಕಾನೂನುಬದ್ಧ ಸಾಗಾಣಿಕೆಗೆ ಸಂಪೂರ್ಣ ಬೆಂಬಲ ನೀಡುತ್ತದೆ. ಆದರೆ ಯಾವುದೇ ವ್ಯಕ್ತಿ ಕಾನೂನು ಉಲ್ಲಂಘಿಸಿ ಅಪರಾಧ ಎಸಗಿದರೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವಾಗಿದ್ದರೂ ಸಹ ಕಾನೂನಿನ ಮುಂದೆ ಎಲ್ಲರೂ ಸಮಾನರು, ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಯಾವುದೇ ರಾಜಕೀಯ ಪಕ್ಷ, ವ್ಯಕ್ತಿ ಅಥವಾ ಸಂಘಟನೆ ಒತ್ತಡಕ್ಕೆ ಮಣಿಯದೇ ಸಂಪೂರ್ಣ ನಿಷ್ಪಕ್ಷಪಾತವಾಗಿ, ಪಾರದರ್ಶಕವಾಗಿ ಹಾಗೂ ಕಾನೂನುಬದ್ದವಾಗಿ ನಡೆಸಲು ತಮ್ಮಲ್ಲಿ ದಾಖಲೆಗಳು, ಕಾಂಗ್ರೆಸ್, ಈ ಪ್ರಕರಣದಲ್ಲಿ ಲಭ್ಯವಿರುವ ಎಲ್ಲಾ ಸಾಕ್ಷಾದಾರಗಳು, ಅಅ ಖಿಗಿ ದೃಶ್ಯಗಳು, ವೀಡಿಯೋಗಳು, ಸಾಕ್ಷಿದಾರರ ಹೇಳಿಕೆಗಳು ಹಾಗೂ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ ನೈಜ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.
ಅದೇ ಸಮಯದಲ್ಲಿ ಯಾವುದೇ ನಿರಾಪರಾಧಿಗಳಿಗೆ ಅನಗತ್ಯ ತೊಂದರೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು, ಜಿಲ್ಲಾ ಪೊಲೀಸ್ ಇಲಾಖೆಯ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದ್ದು, ನ್ಯಾಯಯುತ ತನಿಖೆ ನಡೆಸಬೇಕೆಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾದ ಶಶಾಂಕ್.ಎನ್ ಉಪಾಧ್ಯಕ್ಷರಾದ ಭರತ್ ಬಿ.ಟಿ., ಸದಸ್ಯರಾದ ಕೆ.ಸಿ.ರಾಕೇಶ್, ಎಸ್.ಶಿವಕುಮಾರ್, ರುದ್ರಮುನಿ ಹಾಗೂ ದೀಪಶ್ರೀ ಉಪಸ್ಥಿತರಿದ್ದರು.
Follow the ಸಮಗ್ರ ಸುದ್ದಿ Telegram Channel: https://t.me/SamagraSuddi
ಸಮಗ್ರ ಸುದ್ದಿ channel on WhatsApp: