ಚಿತ್ರದುರ್ಗ ಬಿಜೆಪಿ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಜನ್ಮದಿನ, ಡಾ. ಬಾಬು ಜಗಜೀವನ್ ರಾಮ್‌ಗೆ ಪುಷ್ಪನಮನ.

ಚಿತ್ರದುರ್ಗ ಜು. 6

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ನಗರದ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಸೋಮವಾರ ಜನ ಸಂಘದ ನೇತಾರ ಡಾ.ಶ್ಯಾಮ ಪ್ರಸಾದ್ ಮುಖರ್ಜಿಯವರ ಜನ್ಮ ದಿನಾಚರಣೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ, ಭಾರತದ ಮಾಜಿ ಉಪಪ್ರಧಾನ ಮಂತ್ರಿ, ಹಸಿರು ಕ್ರಾಂತಿ ಹರಿಕಾರ ಶೋಷಿತ ವರ್ಗದ ಧ್ವನಿಯಾಗಿದ್ದ ಡಾ.ಬಾಬು ಜಗಜೀವನರಾಂರವರು ಪುಣ್ಯ ಸ್ಮರಣೆಯ ಅಂಗವಾಗಿ ಇಬ್ಬರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ನಗರಾಧ್ಯಕ್ಷರಾದ ಲೋಕೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಜಿಲ್ಲಾ ಎಸ್.ಸಿ.ಮೋರ್ಚಾದ ಅಧ್ಯಕ್ಷ ಪರಶುರಾಮ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ನಗರ ಪ್ರಧಾನ ಕಾರ್ಯದರ್ಶಿ ಬಸವೇಶ್, ಒಬಿಸಿ ಮೋಚಾದ ಅಧ್ಯಕ್ಷ ಲಕ್ಷ್ಮೀ ನರಸಿಂಹಸ್ವಾಮಿ, ಎಸ್.ಸಿ.ಜಿಲ್ಲಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಚೇತನ ಕುಮಾರ್, ಗ್ರಾಮಾಂತರ ಅಧ್ಯಕ್ಷ ಕುಮಾರ್, ಮಹಾಂತೇಶ್ ಸಿಂಧುತನಯ ಪ್ರಸನ್ನ ನವೀನ್ ಸುಮಾ ಸತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Follow the ಸಮಗ್ರ ಸುದ್ದಿ Telegram Channel: https://t.me/SamagraSuddi

ಸಮಗ್ರ ಸುದ್ದಿ channel on WhatsApp:

https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *