ಚಿತ್ರದುರ್ಗ: ಹಿರಿಯ ಜೀವಿ ಕೋಟ್ಲ ರಾಮಲಿಂಗಾರೆಡ್ಡಿ ನಿಧನ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ: ನಗರದ ಕೆಎಸ್‍ಆರ್‍ಟಿಸಿ ಬಸ್ ಡಿಪೋ ರಸ್ತೆ ನಿವಾಸಿ ಹಾಗೂ ಹಾಯ್ಕಲ್ ಗ್ರಾಮದ ಮೂಲದವರಾದ ಕೋಟ್ಲ ರಾಮಲಿಂಗಾರೆಡ್ಡಿ (87) ಅವರು ಶುಕ್ರವಾರದಂದು ಇಹಲೋಕ ತ್ಯಜಿಸಿದ್ದಾರೆ.

ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಶನಿವಾರದಂದು ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ಮುಕ್ತಿಧಾಮದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಸಮಗ್ರ ಸುದ್ದಿಗೆ ಮಾಹಿತಿ ನೀಡಿವೆ.

Follow the ಸಮಗ್ರ ಸುದ್ದಿ Telegram Channel: https://t.me/SamagraSuddi

ಸಮಗ್ರ ಸುದ್ದಿ channel on WhatsApp: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *