ಚಳ್ಳಕೆರೆಯ ಎಸ್‌ಟಿ ಮೋರ್ಚಾ ಜಾಗೃತಿ ಸಮಾವೇಶ ಮುಂದೂಡಿಕೆ: ಬಿಜೆಪಿ ಜಿಲ್ಲಾಧ್ಯಕ್ಷರ ಮಾಹಿತಿ

ಚಿತ್ರದುರ್ಗ, ಜು. 18:

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817


ಚಳ್ಳಕೆರೆ ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಜುಲೈ 19ರಂದು ನಡೆಯಬೇಕಿದ್ದ ಬಿಜೆಪಿ ಎಸ್‌ಟಿ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ಎಸ್‌ಟಿ ಸಮುದಾಯದ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶವನ್ನು ಮುಂದೂಡಲಾಗಿದೆ.

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಸಮಾವೇಶವನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಚಿತ್ರದುರ್ಗ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸಮಾವೇಶದ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಲು ಉದ್ದೇಶಿಸಿದ್ದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮುಂದಿನ ಅಧಿಕೃತ ಪ್ರಕಟಣೆಯನ್ನು ಗಮನಿಸುವಂತೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *