ಚಿತ್ರದುರ್ಗ ಜು. 22
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
2026, ಮಾರ್ಚ್/ಏಪ್ರಿಲ್‍ನಲ್ಲಿ ನಡೆದ ಹತ್ತನೆ ತರಗತಿ ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ. 85ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಮತ್ತು ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಡಿಸ್ಟಿಂಕ್ಷನ್ ಪಡೆದಿರುವ ಜಿಲ್ಲಾ ಜಂಗಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ. ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಜಂಗಮ ಸಮಾಜ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಎಸ್.ಷಡಾಕ್ಷರಯ್ಯ ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು ದಿನಾಂಕ : 14-8-2026 ರ ಶುಕ್ರವಾರದ ಒಳಗಾಗಿ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಜಂಗಮ ಸಮಾಜ ಸಂಸ್ಥೆ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬಿಲ್ಡಿಂಗ್, ಮೊದಲ ಮಹಡಿ, ಜೆ.ಸಿ.ಆರ್. ಸರ್ಕಲ್ ಚಿತ್ರದುರ್ಗ-577501 ಈ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ : 9449681797, 9449856955, 9448131666 ಸಂಖ್ಯೆಗಳನ್ನು ಸಂಪರ್ಕಿಸ ಬಹುದಾಗಿದೆ ಎಂದು ಎಸ್.ಷಡಾಕ್ಷರಯ್ಯ ತಿಳಿಸಿದ್ದಾರೆ.