ಚಿತ್ರದುರ್ಗ: ಕಬೀರಾನಂದಾಶ್ರಮದಲ್ಲಿ ಜುಲೈ 29 ರಂದು ‘ಗುರು ಪೂರ್ಣಿಮಾ’ ಕಾರ್ಯಕ್ರಮ.

ಚಿತ್ರದುರ್ಗ ಜು. 27

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್

ಚಿತ್ರದುರ್ಗ ನಗರದ ಕಬೀರಾನಂದ ನಗರದಲ್ಲಿನ ಶ್ರೀ ಸದ್ಗುರು ಕಬೀರಾನಂದಾಶ್ರಮದಲ್ಲಿ ಗುರು ಪೂರ್ಣಿಮಾ ಅಂಗವಾಗಿ ಜು. 29 ರ ಬುಧವಾರ ಸಂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರಾದ ಗಣಪತಿ ಶಾಸ್ತ್ರಿ ತಿಳಿಸಿದ್ದಾರೆ.

ಅಂದು ಸಂಜೆ 7 ಗಂಟೆಗೆ ಶ್ರೀ ಸದ್ಗುರು ಕಬೀರಾನಂದಾಶ್ರಮದ ಶ್ರೀ ಸದ್ಗುರು ಶ್ರೀ ಶಿವಲಿಂಗಾನಂದ ಮಹಾ ಸ್ವಾಮಿಗಳವರ ಪಾದಪೂಜೆಯೊಂದಿಗೆ ಗುರು ಪೂರ್ಣಿಮಾ ಕಾರ್ಯಕ್ರಮವನ್ನು ಆಚರಿಸಲಾಗುವುದು. ಈ ಕಾರ್ಯಕ್ರಮಕ್ಕೆ ಶ್ರೀ ಮಠದ ಭಕ್ತರು ಆಗಮಿಸುವುದರ ಮೂಲಕ ಗುರುವಿನ ಕೃಪಾಶೀರ್ವಾದಕ್ಕೆ  ಪಾತ್ರರಾಗುವಂತೆ ಮನವಿ ಮಾಡಿದ್ದಾರೆ. 

Leave a Reply

Your email address will not be published. Required fields are marked *