ಚಿತ್ರದುರ್ಗ ಆ. 4
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಜಿಲ್ಲಾ ಲಿಂಗಾಯತ ಶಿವಶಿಂಪಿ ಸಮಾಜದವತಿಯಿಂದ ಕುಲಗುರು ಶ್ರೀ ಶಿವದಾಶಿಮಯ್ಯ ಜಯಂತಿ, ರಜತ ಮಹೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆ. 9 ರ ಭಾನುವಾರ ಬೆಳಗ್ಗೆ 11.30ಕ್ಕೆ ಮದಕರಿ ವೃತ್ತದಲ್ಲಿನ ಮಹರ್ಷಿ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಲಿಂಗಾಯತ ಶಿವಶಿಂಪಿ ಸಮಾಜದ ಕಾರ್ಯದರ್ಶಿ ಇ.ಕೆ. ಮಲ್ಲಿಕಾರ್ಜನ್ ಹಾಗೂ ಉಪಾಧ್ಯಕ್ಷರಾದ ಡಿ.ವಿ.ಮುರಗೇಶ್ ತಿಳಿಸಿದ್ದಾರೆ.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶಿವಮೊಗ್ಗದ ಬೆಕ್ಕಿನ ಕಲ್ಮಠದ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಸ್ಮರಣ ಸಂಚಿಕೆ ಯನ್ನು ಯೋಗವನ ಬೆಟ್ಟದ ಅಧ್ಯಕ್ಷರು, ಶ್ರೀ ಬೃಹನ್ಮಠ ಮತ್ತು ಎಸ್.ಜೆ.ಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು ಬಿಡುಗಡೆ ಮಾಡಲಿದ್ದಾರೆ. ಸಮ್ಮುಖವನ್ನು ತುಮಕೂರು ಜಿಲ್ಲೆಯ ತಂಗನಹಳ್ಳಿಯ ಶ್ರೀ ಅನ್ನಪೂರ್ಣೇಶ್ವರಿ ಸುಕ್ಷೇತ್ರದ ಶ್ರೀ ಬಸವ ಮಹಾಲಿಂಗಸ್ವಾಮಿಗಳು ವಹಿಸಲಿ ದ್ದಾರೆ. ಕಾರ್ಯಕ್ರಮವನ್ನು ಸಂಸದರಾದ ಗೋವಿಂದ ಕಾರಜೋಳ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆ ಯನ್ನು ಚಿತ್ರದುರ್ಗ ಜಿಲ್ಲಾ ಲಿಂಗಾಯತ ಶಿವಶಿಂಪಿ ಸಮಾಜದ ಅಧ್ಯಕ್ಷರಾದ ಪಿ.ಎಸ್. ಶಂಭುಲಿಂಗಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಕೆ.ಸಿ. ವೀರೇಂದ್ರ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ಮಾಜಿ ಶಾಸಕರುಗಳಾದ ಎಸ್.ಕೆ. ಬಸವರಾಜನ್, ಜಿ.ಎಚ್. ತಿಪ್ಪಾರೆಡ್ಡಿ, ವೀರಶೈವ ಸಮಾಜದ ಅಧ್ಯಕ್ಷರಾದ ಎಚ್.ಎನ್.ತಿಪ್ಪೇಸ್ವಾಮಿ ಜಿಲ್ಲಾ ಲಿಂ.ಶಿ.ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಜಯದೇವಮೂರ್ತಿ ಭಾಗವಹಿಸಲಿದ್ದಾರೆ.ಸಮಾಜದ ಸಂಘಟನೆಯ ಬಗ್ಗೆ ಚಿಂತನೆಯನ್ನು ದಾವಣಗೆರೆಯ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಮಲ್ಲಿಕಾರ್ಜುನ ಜವಳಿ ನಡೆಸಿಕೊಡಲಿದ್ದಾರೆ.
ಅಂದು ಬೆಳಿಗ್ಗೆ 9 ಗಂಟೆಯಿಂದ ನರದ ನೀಲಕಂಠೇಶ್ವರ ದೇವಾಲಯದಿಂದ ಸಮಾಜದ ಮೆರವಣಿಗೆ ನಡೆಯಲಿದ್ದು, ಇದರ ಉದ್ಘಾಟನೆಯನ್ನು ಕಲ್ಬುರ್ಗಿಯ ಕಲ್ಯಾಣ ಕರ್ನಾಟಕ ಶಿವಶಿಂಪಿ ಸಮಾಜದ ಅಧ್ಯಕ್ಷರಾದ ವಿಜಯಕುಮಾರ್ ಹಳಕಟ್ಟಿ ನರವೇರಿಸಲಿದ್ದಾರೆ. ಇವರೊಂದಿಗೆ ಬೆಂಗಳೂರಿನ ಶಿವಶಿಂಪಿ ಸಮಾಜಗಳ ಒಕ್ಕೂಟದ ಮಾಜಿ ಅಧ್ಯಕ್ಷರಾದ ಗಂಗಾಧರ ಯಾವಗಲ್, ವಿಜಯಪುರದ ಶಿವ ಶಿಂಪಿ ಸಮಾಜದ ಅಧ್ಯಕ್ಷರಾದ ಎಸ್.ಎಂ. ಸಿಂದಗಿ, ಸೊಲ್ಲಾಪುರದ ಶಿವದಾಸಿಮಯ್ಯ ಶಿವಶಿಂಪಿ ಸಮಾಜದ ಟ್ರಸ್ಟಿ, ಶಿವಶಂಕರ (ರಾಜು) ಚೊಳ್ಳೆ ಶಿವದಾಸಿಮಯ್ಯ ಶಿವಶಿಂಪಿ ಸಮಾಜದ ಅಧ್ಯಕ್ಷರಾದ ದಯಾನಂದ ವಿಜಾಪುರೆ ಭಾಗವಹಿಸಲಿದ್ದಾರೆ.