ಸಾರ್ವಜನಿಕರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶವಿರುವ ಗುಟ್ಕಾ, ಪಾನ್ ಮಸಾಲ ಸೇರಿದಂತೆ ಎಲ್ಲಾ ಬಗೆಯ ನಿಷೇಧಿತ ಉತ್ಪನ್ನಗಳನ್ನು ಸಂಪೂರ್ಣವಾಗಿ ಬ್ಯಾನ್ ಮಾಡಿದೆ.
2006ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ (Food Safety and Standards Act) ಅನ್ವಯ ಈ ಕಠಿಣ ಹೆಜ್ಜೆ ಇಡಲಾಗಿದೆ. ಈ ಹೊಸ ಆದೇಶದ ಪ್ರಕಾರ, ಇಂತಹ ಹಾನಿಕಾರಕ ಉತ್ಪನ್ನಗಳ ಉತ್ಪಾದನೆ, ಸಾಗಾಟ, ದಾಸ್ತಾನು ಮಾಡುವುದು ಹಾಗೂ ಮಾರಾಟ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಒಂದು ವರ್ಷಗಳ ಕಾಲ ನಿಷೇಧ ಜಾರಿ ಸರ್ಕಾರವು ಆಗಸ್ಟ್ 10ರಂದು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆ ಪ್ರಕಟವಾದ ದಿನಾಂಕದಿಂದ ಮುಂದಿನ ಒಂದು ವರ್ಷದವರೆಗೆ ಈ ನಿಷೇಧಾಜ್ಞೆ ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಜಾರಿಯಲ್ಲಿರಲಿದೆ.
ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲಿ ವಿಶೇಷ ತನಿಖೆ ಹಾಗೂ ದಿಢೀರ್ ದಾಳಿ ಕಾರ್ಯಾಚರಣೆಗಳು ಈಗಾಗಲೇ ಆರಂಭಗೊಂಡಿವೆ. ಅಕ್ರಮವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಸಾರ್ವಜನಿಕರಲ್ಲಿ ಸರ್ಕಾರದ ಮನವಿ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ಸಹ ಕೈಜೋಡಿಸುವಂತೆ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ಮನವಿ ಮಾಡಿದೆ. ನಿಮ್ಮ ಸುತ್ತಮುತ್ತಲಿನ ಯಾವುದೇ ಪ್ರದೇಶದಲ್ಲಿ ನಿಷೇಧಿತ ಪಾನ್ ಮಸಾಲ, ಗುಟ್ಕಾ ಅಥವಾ ತಂಬಾಕು ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ ಅಥವಾ ಮಾರಾಟ ಕಂಡುಬಂದರೆ, ತಡಮಾಡದೇ ಹತ್ತಿರದ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j