ಚಿತ್ರದುರ್ಗ ಆ. 19
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ನಿನ್ನೆ ನಿಧನರಾದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಾಜಿ ಸಚಿವ ಬಿ.ಸಿ.ನಾಗೇಶ್ (67) ರವರಿಗೆ ಭಾರತೀಯ ಜನತಾ ಪಾರ್ಟಿ ಬುಧವಾರ ಸಂತಾಪವನ್ನು ಸೂಚಿಸಿ ಶ್ರದ್ದಾಂಜಲಿಯನ್ನು ಸಲ್ಲಿಸಿತು.
ಭಾರತೀಯ ಜನತಾ ಪಾರ್ಟಿಯವತಿಯಿಂದ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿಯಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅನುದಾನ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ, ನಡೆದ ಮೂರನೇ ದಿನದ ಪ್ರತಿಭಟನೆಯ ಸ್ಥಳದಲ್ಲಿ ನಾಗೇಶ್‍ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಮಾಜಿ ಸಚಿವ ಬಿ.ಸಿ. ನಾಗೇಶ್ ಅವರು ಮಂಗಳವಾರ ಬೆಂಗಳೂರಿನ ತಮ್ಮ ಮಗಳ ಮನೆಯಲ್ಲಿ ನಿಧನ ರಾಗಿದ್ದಾರೆ. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಆಗಲಿದ್ದಾರೆ.
ಕಳೆದೊಂದು ವರ್ಷದಿಂದ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಇವರು, ಎರಡು ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು 1959ರ ಜುಲೈ 1ರಂದು ಚಿಕ್ಕಮಗ ಳೂರಿನಲ್ಲಿ ಜನಿಸಿದ ಇವರ ಪೂರ್ಣ ಹೆಸರು ಬೆಳ್ಳೂರು ಚಂದ್ರಶೇಖರಯ್ಯ ನಾಗೇಶ್. ಪ್ರಸಿದ್ಧ ಬೆಳ್ಳೂರು ಮೈಲಾರಯ್ಯನವರ ವಂಶಸ್ಥರಾಗಿದ್ದು, ಮಾಜಿ ಶಾಸಕ ಹಾಗೂ ಶ್ರೀಸತ್ಯ ಗಣಪತಿ ಸೇವಾ ಸಂಘದ ಧರ್ಮದರ್ಶಿಗಳಾಗಿದ್ದ ದಿವಂಗತ ಬಿ.ಎಸ್.ಚಂದ್ರಶೇಖರಯ್ಯನವರ ಮೂರನೇ ಪುತ್ರ. ಬೆಂಗಳೂರಿನ ಪ್ರತಿಷ್ಠಿತ ಬಿ.ಎಂ.ಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದರು. 1984ರಲ್ಲಿ ಬಿಜೆಪಿ ಸೇರಿ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. 2008ರಲ್ಲಿ ಮೊದಲ ಬಾರಿಗೆ ತಿಪಟೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ನಂತರ 2018ರಲ್ಲಿ ಪುನಃ ಗೆದ್ದು, 2021ರಿಂದ 2023ರ ವರೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ರಾಜ್ಯ ಸಚಿವ ಸಂಪುಟದಲ್ಲಿ ಪ್ರಾಥಮಿಕ ಶಿಕ್ಷಣ, ಸಾಕ್ಷರತೆ ಮತ್ತು ಸಕಾಲ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ, ಶಾಲಾ ಸಮವಸ್ತ್ರ ನಿಯಮ, ಶಿಕ್ಷಣದಲ್ಲಿ ಮೌಲ್ಯವರ್ಧನೆ ಮುಂತಾದ ವಿಚಾರಗಳಲ್ಲಿ ಮಹತ್ವದ ಸುಧಾರಣೆ ತಂದಿದ್ದರು.
ಈ ಸಂದರ್ಭದಲ್ಲಿ ವಿಭಾಗ ಸಹ ಪ್ರಚಾರಿ ಮೇಘರಾಜ್, ಮಾಜಿ ಶಾಸಕ ತಿಪ್ಪೇಸ್ವಾಮಿ, ಚಳ್ಳಕೆರೆ ಮಂಡಲ ಅಧ್ಯಕ್ಷ ಸುರೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಮಾರ್ ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಮೋಹನ್ ಕುಮಾರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ರಾಮದಾಸ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ದಗ್ಗೆ ಶಿವಪ್ರಕಾಶ್ ಚಳ್ಳಕೆರೆ ಮಂಡಲದ ಪ್ರಧಾನ ಕಾರ್ಯದರ್ಶಿ ಓಬಳೇಶ್, ಸುರೇಶ್, ಮುಖಂಡರಾದ ಲಿಂಗರಾಜು, ಬಂಡೆ ರಂಗಪ್ಪ, ಶಶೀಧರ್ ರೆಡ್ಡಿ, ಪರಶುರಾಮ್, ಮಂಡಿಸಿನಪ್ಪ, ಜಗದಂಭ, ಲಕ್ಷ್ಮೀ, ಶಾಂತಮ್ಮ, ದೇವರಹಳ್ಳಿ ಶೋಭರಾಜ್ ದೋರೆ ನಾಗರಾಜ್, ಶ್ರೀನಿವಾಸ್, ರಂಗಸ್ವಾಮಿ ಹಾಗೂ ಚಿತ್ರದುರ್ಗ ಮತ್ತು ಚಳ್ಳಕೆರೆಯ ಪ್ರಮುಖ ಮುಖಂಡರ ಉಪಸ್ಥಿತರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j