ಚಳ್ಳಕೆರೆ, ಆ. 22: ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಹೊಂಗಿರಣ ಎಜುಕೇಷನಲ್ ಟ್ರಸ್ಟ್, ಚಳ್ಳಕೆರೆ ಹಾಗೂ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಇವರ ಸಹಯೋಗದಲ್ಲಿ ಚಳ್ಳಕೆರೆಯ ಹೊಂಗಿರಣ ಶಾಲಾ ಆವರಣದಲ್ಲಿ ಆಗಸ್ಟ್ 23ರಂದು ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಆಗಸ್ಟ್ 23ರ ಭಾನುವಾರ ಸಂಜೆ 6 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಚಳ್ಳಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಕೆ. ಸುರೇಶ್ ಅವರು ಉದ್ಘಾಟಿಸಲಿದ್ದಾರೆ. ಇಸ್ರೋದ ನಿವೃತ್ತ ವಿಜ್ಞಾನಿ ಎಚ್.ಡಿ. ಆನಂದ್ ಅವರು ಬಾಹ್ಯಾಕಾಶ ವಿಜ್ಞಾನ ಹಾಗೂ ಭಾರತದ ಬಾಹ್ಯಾಕಾಶ ಕ್ಷೇತ್ರದ ಸಾಧನೆಗಳ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಹೊಂಗಿರಣ ಸಂಸ್ಥೆಯ ಎಸ್. ರಾಜೇಶ್ ಗುಪ್ತ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಜಿ.ಎನ್. ಮಲ್ಲಿಕಾರ್ಜುನಪ್ಪ, ಶ್ರೀ ಚಳ್ಳಕೆರೆ ಯರ್ರಿಸ್ವಾಮಿ, ಎಚ್.ಎಸ್.ಟಿ. ಸ್ವಾಮಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಮಂಜುಬಾಬು, ಪಿ. ದಯಾನಂದ, ಡಿ. ಶಿವಪ್ರಸಾದ್, ಕೆ.ವಿ. ನಾಗಲಿಂಗರೆಡ್ಡಿ, ಈ. ರುದ್ರಮುನಿ ಮತ್ತು ಮಧುಸೂಧನ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಸಂಚಾಲಕರಾಗಿ ಹೆಚ್. ಮಂಜುನಾಥ್ ಕಾರ್ಯನಿರ್ವಹಿಸಲಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಬಾಹ್ಯಾಕಾಶ ವಿಜ್ಞಾನದ ಕುರಿತು ಆಸಕ್ತಿ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭಾರತದ ಬಾಹ್ಯಾಕಾಶ ಕ್ಷೇತ್ರದ ಪ್ರಗತಿ, ಇಸ್ರೋದ ಸಾಧನೆಗಳು ಹಾಗೂ ಬಾಹ್ಯಾಕಾಶ ವಿಜ್ಞಾನದ ಮಹತ್ವದ ಕುರಿತು ತಿಳಿದುಕೊಳ್ಳಲು ಈ ಕಾರ್ಯಕ್ರಮ ಉತ್ತಮ ಅವಕಾಶವಾಗಲಿದೆ.
ವಿದ್ಯಾರ್ಥಿಗಳು, ಶಿಕ್ಷಕರು, ವಿಜ್ಞಾನಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
