ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಮುನ್ನೆಚ್ಚರಿಕೆಯಾಗಿ ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿವೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್
- ಕರಾವಳಿ ಜಿಲ್ಲೆಗಳು: ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ವೇಳೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
- ಮಲೆನಾಡು ಜಿಲ್ಲೆಗಳು: ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ
- ಉತ್ತರ ಒಳನಾಡು: ವಿಜಯಪುರ, ಬೆಳಗಾವಿ, ಕಲಬುರಗಿ, ಧಾರವಾಡ ಮತ್ತು ಗದಗ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿಯಲ್ಲೂ ಮಳೆಯಾಗುವ ಸಾಧ್ಯತೆಯಿದೆ.
- ದಕ್ಷಿಣ ಒಳನಾಡು ಮತ್ತು ಬೆಂಗಳೂರು: ಬೆಂಗಳೂರು ನಗರ, ತುಮಕೂರು, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಬಹುದು. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ.
ಆಗಸ್ಟ್ 26ರ ಹವಾಮಾನ ಮುನ್ಸೂಚನೆ
- ಕರಾವಳಿ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ.
- ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
- ಉಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಕಂಡುಬರಲಿದೆ.
ಕಳೆದ 24 ಗಂಟೆಗಳಲ್ಲಿ ದಾಖಲಾದ ಪ್ರಮುಖ ಮಳೆ ವಿವರ
- ನೀಲಕುಂದ (ಉತ್ತರ ಕನ್ನಡ): 9 ಸೆಂ.ಮೀ
- ಹುಮನಾಬಾದ್ (ಬೀದರ್): 8 ಸೆಂ.ಮೀ
- ಶ್ರೀಮಂಗಲ (ಕೊಡಗು): 8 ಸೆಂ.ಮೀ
- ಆಗುಂಬೆ (ಶಿವಮೊಗ್ಗ): 7 ಸೆಂ.ಮೀ
- ಧರ್ಮಸ್ಥಳ (ದಕ್ಷಿಣ ಕನ್ನಡ): 7 ಸೆಂ.ಮೀ
- ಸಂತಹಳ್ಳಿ (ಕೊಡಗು): 7 ಸೆಂ.ಮೀ
ಮುನ್ನೆಚ್ಚರಿಕೆ: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ನದಿ ಪಾತ್ರದ ನಿವಾಸಿಗಳು ಹಾಗೂ ವಾಹನ ಸವಾರರು ಸೂಕ್ತ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j