ಚಿತ್ರದುರ್ಗ| ಆ.26ರಂದು ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ: ಹಕ್ಕು ಮತ್ತು ಕಾನೂನು ಅರಿವು ಕಾರ್ಯಕ್ರಮ.

ಚಿತ್ರದುರ್ಗ ಆ. 25

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ) ಚಿತ್ರದುರ್ಗ ತಾಲ್ಲೂಕು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯು ಆ.26ರ ಬುಧವಾರ ಕರುವಿನಕಟ್ಟೆ ವೃತ್ತದಲ್ಲಿನ ಶ್ರೀ ಸದ್ಗುರು ಕಬೀರಾನಂದಸ್ವಾಮಿ ಮರದ ಶಾಲಾ ಅವರಣದಲ್ಲಿ ಬೆಳಿಗ್ಗೆ 11.30ಕ್ಕೆ ಹಮ್ಮಿಕೊಳ್ಳಲಾಗಿದೆ. ವಿಚಾರಗೋಷ್ಠಿಯ ಉದ್ಘಾಟನೆಯನ್ನು ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಶ್ರೀಮತಿ ರುಕ್ಕಮ್ಮ .ಬಿ ನಡೆಸಲಿದ್ದಾರೆ.

ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ)ನ ಜಿಲ್ಲಾ ಅಧ್ಯಕ್ಷರಾದ ಶ್ರೀಮತಿ ರೂಪಜನಾರ್ಧನ್ ವಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ)ನ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಗೀತಾ ಭಾಗವಹಿಸಲಿದ್ದು, ಮಹಿಳೆಯ ಹಕ್ಕು ಮತ್ತು ಕಾನೂನು ಮಾಹಿತಿ ಬಗ್ಗೆ ಎಸ್.ಜೆ.ಎಂ. ಕಾನೂನು ಕಾಲೇಜ್‍ನ ಅಸೋಸಿಯೇಟ್ ಪ್ರೋಫೆಸರ್ ಶ್ರೀಮತಿ ಸುಮನ .ಎಸ್ ಅಂಗಡಿ ಉಪನ್ಯಾಸ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ರಂಗೋಲಿ ಸ್ಪರ್ಧೆ, ಪುಷ್ಪಗುಚ್ಚ ಸ್ಪರ್ದೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಜ್ಞಾನವಿಕಾಸ ಸದಸ್ಯರ ಕೌಶಲ್ಯವನ್ನು ಗುರುತಿಸುವ ಕಾರ್ಯವನ್ನು ಈ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ನಡೆಸಲಾಗುತ್ತದೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *