ಚಿತ್ರದುರ್ಗ ಅ. 01
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಜಿಲ್ಲಾ ಕಾಂಗ್ರೆಸ್ ಸಮಿತಿಗೆ ವಕ್ತಾರರನ್ನಾಗಿ ಹಿರಿಯೂರಿನ ಶ್ರೀಮತಿ ಮಾನಸ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ಮತ್ತು ಸಂವೇಹನ ವಿಭಾಗದ ಅಧ್ಯಕ್ಷರಾದ ರಮೇಶ್ ನೇಮಕ ಮಾಡಿದ್ದಾರೆ.
ಇದೇ ಮೊದಲ ಭಾರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಮಹಿಳೆಯೊಬ್ಬರಿಗೆ ವಕ್ತಾರರನ್ನಾಗಿ ಉನ್ನತ ಹುದ್ದೆ ನೀಡಲಾಗಿದ್ದು ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಈ ನೇಮಕಾತಿ ಆದೇಶ ಪತ್ರವನ್ನು ಜಿಲ್ಲಾ ಅಧ್ಯಕ್ಷ ಎಂ.ಕೆ. ತಾಜ್ಪೀರ್ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾನಸ, ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷದ ನಾಯಕರು ವಕ್ತಾರರನ್ನಾಗಿ ನೇಮಕ ಮಾಡಿದ್ದಾರೆ. ಕಾಂಗ್ರೆಸ್ ತತ್ವ ಸಿದ್ಧಾಂತ ಅನುಸಾರವಾಗಿ ಕೆಲಸ ಮಾಡುವುದಾಗಿ ತಿಳಿಸಿ ನಮ್ಮ ಕುಟುಂಬ ನಾಲ್ಕು ದಶಕಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಮಾಡಿದೆ. ನಾನು ಸಹ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡಿದ್ದು, ಇದನ್ನು ಪರಿಗಣಿಸಿ ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ನುಡಿದರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್ಪೀರ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸ ಇದ್ದು, ಸಾಮಾಜಿಕ ನ್ಯಾಯ ನಮ್ಮ ಮೂಲ ತತ್ವ. ಇದನ್ನು ಪರಿಪಾಲನೆ ಮಾಡಿಕೊಂಡು ಪಕ್ಷದ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್ ಶಿವಣ್ಣ, ಜಿಲ್ಲಾ ಪಂಚಾ ಯತ್ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿಕಾಂತ್,ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ ಬಾಬು,ಜಿ.ಪಂ. ಮಾಜಿ ಸದಸ್ಯ ಚಂದ್ರಪ್ಪ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಡಿ ಎನ್ ಮೈಲಾರಪ್ಪ, ಮುಖಂಡರುಗಳಾದ ಜಾನ್ಹವಿ ನಾಗರಾಜ್ ಮರುಳಾರಾಧ್ಯ,ಮಂಜುನಾಥ್, ಹಿರಿಯೂರು ನಗರ ಸಭೆ ಮಾಜಿ ಉಪಾಧ್ಯಕ್ಷೆ ಅಂಬಿಕಾ, ವಾಣಿ, ಚಿದಾನಂದ್ ಮೂರ್ತಿ, ರಾಮಚಂದ್ರಪ್ಪ, ಇತರರು ಹಾಜರಿದ್ದರು
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j