ಚಿತ್ರದುರ್ಗ:
ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭೀಮಸಮುದ್ರ ಗ್ರಾಮದಲ್ಲಿ ನೂತನ ಶ್ರೀ ಕೃಷ್ಣ ದೇವಸ್ಥಾನ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.

ಗ್ರಾಮದಲ್ಲಿ ಬೆಳಗ್ಗೆ 11 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಮಹಿಳೆಯರು ಗಂಗಾದೇವತಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀ ಕೃಷ್ಣನ ಭಾವಚಿತ್ರ ಹಾಗೂ ವಿಗ್ರಹಕ್ಕೆ ಪೂಜೆ ಸಲ್ಲಿಸಿ, ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಶುಭಾರಂಭ ಮಾಡಲಾಯಿತು.
ಗ್ರಾಮ ಪಂಚಾಯಿತಿ ಪಿಡಿಒ ಅಂಸಿರಾ ಬಾನು ಅವರು ಹಲೋ ತುಪ್ಪ ಹಾಕುವ ಮೂಲಕ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಕೃಷ್ಣನ ದೇವಸ್ಥಾನ ನಿರ್ಮಾಣವಾಗುತ್ತಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದ್ದು, ದೇವಸ್ಥಾನವು ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಕೇಂದ್ರವಾಗಲಿದೆ ಎಂದು ಗ್ರಾಮಸ್ಥರು ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್, ಮುಖಂಡರಾದ ಜಿ.ಎಸ್. ಸಿದ್ದೇಶ, ಮಂಜುನಾಥ್, ವಿಠಲ ಕುಮಾರ್, ನಿಜಲಿಂಗಪ್ಪ, ನಾಗರಾಜ್ ಸೇರಿದಂತೆ ಹಲವು ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಶ್ರೀ ಕೃಷ್ಣ ಜನ್ಮಾಷ್ಟಮಿಯ ಪವಿತ್ರ ಸಂದರ್ಭದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಚಾಲನೆ ದೊರೆತಿರುವುದು ವಿಶೇಷವಾಗಿದ್ದು, ಮುಂದಿನ ದಿನಗಳಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ದೇವಸ್ಥಾನ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ನಿರೀಕ್ಷೆ ವ್ಯಕ್ತವಾಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j