ದಾವಣಗೆರೆ ತಾಲೂಕಿನ ಕೊಕ್ಕನೂರು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಾರು ಡಿಕ್ಕಿಯಾಗಿ ಗಾಯಗೊಂಡು ನರಳುತ್ತಿದ್ದ ಚಿರತೆಯೊಂದನ್ನು ರಕ್ಷಿಸಲು ಹೋದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆಯೇ ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ವರದಿಯಾಗಿದೆ.
ಸೋಮವಾರ ರಾತ್ರಿ ಹೆದ್ದಾರಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆ ಗಂಭೀರವಾಗಿ ಗಾಯಗೊಂಡು ಪಕ್ಕದ ಚರಂಡಿಗೆ ಬಿದ್ದಿತ್ತು. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪೆಟ್ರೋಲಿಂಗ್ ಪೊಲೀಸರು ಗಮನಿಸಿ, ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಮುಟ್ಟಿಸಿದ್ದರು. ಇಡೀ ರಾತ್ರಿ ನೋವಿನಿಂದ ನರಳುತ್ತಿದ್ದ ಚಿರತೆಗೆ ಸೂಕ್ತ ಚಿಕಿತ್ಸೆ ನೀಡಿ ರಕ್ಷಿಸಲು ಅರಣ್ಯ ಇಲಾಖೆ ಮುಂದಾಗಿತ್ತು ಎಂದು ಎಸಿಎಫ್ (ACF) ಆನಂದ್ ತಿಳಿಸಿದ್ದಾರೆ.
ಹಂಪಿಯಿಂದ ಆಗಮಿಸಿದ ಪಶುವೈದ್ಯರ ತಂಡ ಹಾಗೂ ಅರಣ್ಯ ಸಿಬ್ಬಂದಿ ಮಂಗಳವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಕಾರ್ಯಾಚರಣೆ ಆರಂಭಿಸಿದರು. ಚಿರತೆಯನ್ನು ಸೆರೆಹಿಡಿಯಲು ಮೊದಲ ಅರಿವಳಿಕೆ ಚುಚ್ಚುಮದ್ದು ನೀಡುವಾಗ ಕೆರಳಿದ ವನ್ಯಜೀವಿ, ಏಕಾಏಕಿ ಸಿಬ್ಬಂದಿ ಮೇಲೆರಗಿದೆ. ದಾಳಿಯಿಂದ ಗಾಯಗೊಂಡ ಅರಣ್ಯ ಸಿಬ್ಬಂದಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತರುವಾಯ ಎರಡನೇ ಬಾರಿಗೆ ಅರಿವಳಿಕೆ ಮದ್ದು ನೀಡಿ, ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿದು ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j