ಚಿತ್ರದುರ್ಗ ಸೆ. 09
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಮೊಳಕಾಲ್ಮೂರು ಕ್ಷೇತ್ರದ ಮೊಳಕಾಲ್ಮೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಬಿ.ಟಿ.ನಾಗಭೂಷಣ ರವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ಆದೇಶ ವನ್ನು ಹೂರಡಿಸಿದ್ದು ನಿನ್ನೆ ಸಂಜೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ತಾಜ್‍ಪೀರ್‍ರವರು ನಾಗಭೂಷಣ್‍ರವರಿಗೆ ನೇಮಕಾತಿಯ ಅದೇಶ ಪತ್ರವನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಜ್‍ಪೀರ್‍ರವರು ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸಬೇಕಿದೆ ಮುಂಬರುವ ಜಿ.ಪಂ.ತಾ.ಪಂ.ಗ್ರಾ.ಪಂ.ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಮುಂದಾಗಬೇಕಿದೆ. ಕಾಲ ಕಾಲಕ್ಕೆ ಜಿಲ್ಲಾ ಸಮಿತಿ ನೀಡುವ ಮಾರ್ಗ ದರ್ಶನ ಹಾಗೂ ಸ್ಥಳಿಯ ನಾಯಕರುಗಳ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಂಘಟಿಸಬೇಕಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್‍ಕುಮಾರ್, ಮೈಲಾರಪ್ಪ, ನಗರಾಧ್ಯಕ್ಷ ಲಕ್ಷ್ಮೀಕಾಂತ್, ಮಧುಗೌಡ, ನರಹರಿ ಉಪಸ್ಥಿತರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j