ಬ್ಯಾಂಕ್ ಆಫ್ ಬರೋಡಾ (Bank of Baroda) ದೇಶಾದ್ಯಂತ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಲೋಕಲ್ ಬ್ಯಾಂಕ್ ಆಫೀಸರ್ (Local Bank Officer) ಹುದ್ದೆಗಳ ಭರ್ತಿಗಾಗಿ ಹೊರಡಿಸಿರುವ ಅಧಿಸೂಚನೆಯ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಿದೆ. ಈ ಕುರಿತು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಂಪೂರ್ಣ ವಿವರಗಳನ್ನು ಗಮನಿಸಬಹುದು.
ಪ್ರಮುಖ ದಿನಾಂಕಗಳು
- ಮೂಲ ಕೊನೆಯ ದಿನಾಂಕ: ಸೆಪ್ಟೆಂಬರ್ 7, 2026
- ವಿಸ್ತರಿಸಲಾದ ಕೊನೆಯ ದಿನಾಂಕ: ಸೆಪ್ಟೆಂಬರ್ 17, 2026
ಹುದ್ದೆಗಳ ವಿವರ ಮತ್ತು ಸ್ಥಳೀಯ ಪ್ರಾಮುಖ್ಯತೆ
- ಒಟ್ಟು ಹುದ್ದೆಗಳು: 2,482
- ಕರ್ನಾಟಕದಲ್ಲಿ ಲಭ್ಯವಿರುವ ಹುದ್ದೆಗಳು: 418
- ದಿನಾಂಕ ವಿಸ್ತರಣೆಯನ್ನು ಹೊರತುಪಡಿಸಿ, ಶೈಕ್ಷಣಿಕ ಅರ್ಹತೆ ಮತ್ತು ಇತರ ನಿಯಮಗಳು ಹಿಂದಿನ ಅಧಿಸೂಚನೆಯಂತೆ ಮುಂದುವರಿಯಲಿವೆ.
ವಿದ್ಯಾರ್ಹತೆ ಮತ್ತು ಕಾರ್ಯಾನುಭವ
- ವಿದ್ಯಾರ್ಹತೆ: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಪೂರ್ಣಗೊಳಿಸಿರಬೇಕು.
- ಭಾಷಾ ಜ್ಞಾನ: ಆಯಾ ರಾಜ್ಯದ ಸ್ಥಳೀಯ ಭಾಷೆಯನ್ನು ಓದಲು, ಬರೆಯಲು, ಮಾತನಾಡಲು ಮತ್ತು ಅರ್ಥಮಾಡಿಕೊಳ್ಳಲು ತಿಳಿದಿರಬೇಕು.
- ಕಾರ್ಯಾನುಭವ: ಕನಿಷ್ಠ 1 ವರ್ಷದ ಬ್ಯಾಂಕಿಂಗ್ ಅಥವಾ ಸಂಬಂಧಿತ ಅನುಭವ ಕಡ್ಡಾಯವಾಗಿದೆ.
ವಯೋಮಿತಿ
- ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಹಾಗೂ ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು.
- ಸರ್ಕಾರದ ನಿಯಮಾನುಸಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ:
- ಒಬಿಸಿ (OBC) ಅಭ್ಯರ್ಥಿಗಳಿಗೆ: 3 ವರ್ಷಗಳು
- ಎಸ್‌ಸಿ / ಎಸ್‌ಟಿ (SC/ST) ಅಭ್ಯರ್ಥಿಗಳಿಗೆ: 5 ವರ್ಷಗಳು
- ಪಿಡಬ್ಲ್ಯುಬಿಡಿ (PwBD) ಅಭ್ಯರ್ಥಿಗಳಿಗೆ: 10 ರಿಂದ 15 ವರ್ಷಗಳು
ಅರ್ಜಿ ಶುಲ್ಕ
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ / ಮಹಿಳಾ ಅಭ್ಯರ್ಥಿಗಳು: ರೂ. 175/-
- ಸಾಮಾನ್ಯ / ಇಡಬ್ಲ್ಯೂಎಸ್ / ಒಬಿಸಿ ಅಭ್ಯರ್ಥಿಗಳು: ರೂ. 850/-
- ಶುಲ್ಕವನ್ನು ಆನ್‌ಲೈನ್ ಮೂಲಕ ಮಾತ್ರ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷಾ ಕೇಂದ್ರಗಳು
ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಸಂದರ್ಶನ, ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಆನ್‌ಲೈನ್ ಪರೀಕ್ಷೆಯ ಮಾದರಿ: ಒಟ್ಟು 120 ಬಹುಆಯ್ಕೆ ಪ್ರಶ್ನೆಗಳು ಇರುತ್ತವೆ (ತಲಾ 1 ಅಂಕ).
- ಇಂಗ್ಲಿಷ್ ಭಾಷೆ: 30 ಪ್ರಶ್ನೆಗಳು
- ಬ್ಯಾಂಕಿಂಗ್ ಜ್ಞಾನ: 30 ಪ್ರಶ್ನೆಗಳು
- ಸಾಮಾನ್ಯ / ಆರ್ಥಿಕ ಜ್ಞಾನ: 30 ಪ್ರಶ್ನೆಗಳು
- ರೀಸನಿಂಗ್ ಮತ್ತು ಕ್ವಾಂಟಿಟೇಟಿವ್ಪಪ್ಟಿಟ್ಯೂಡ್: 30 ಪ್ರಶ್ನೆಗಳು
- ಅವಧಿ: 120 ನಿಮಿಷಗಳು (ತಪ್ಪು ಉತ್ತರಗಳಿಗೆ ನೆಗೆಟಿವ್ ಮಾರ್ಕ್ಸ್ ಇರುತ್ತದೆ).
- ಕರ್ನಾಟಕದಲ್ಲಿರುವ ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಮೈಸೂರು, ಕಲಬುರಗಿ, ಉಡುಪಿ, ಶಿವಮೊಗ್ಗ, ಮಂಗಳೂರು ಮತ್ತು ಬೆಳಗಾವಿ.
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಕೃತ ವೆಬ್‌ಸೈಟ್ ಅಥವಾ ನೇರ ಲಿಂಕ್ ibpsreg.ibps.in/bobjul26 ಗೆ ಭೇಟಿ ನೀಡಿ.
- ನಿಮ್ಮ ಮೂಲ ವಿವರಗಳನ್ನು ನೀಡಿ ಹೆಸರು ನೋಂದಾಯಿಸಿ (Registration).
- ಲಾಗಿನ್Credentials ಬಳಸಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ Submit ನೀಡಿ.
- ಭವಿಷ್ಯದ ಉಪಯೋಗಕ್ಕಾಗಿ ಭರ್ತಿ ಮಾಡಿದ ಅರ್ತಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ bankofbaroda.in ಗೆ ಭೇಟಿ ನೀಡಿ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j