ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸಿದ್ದ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/DAR) ಹುದ್ದೆಗಳ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಅತಿ ಕಡಿಮೆ ಅವಧಿಯಲ್ಲಿ ಬಿಡುಗಡೆ ಮಾಡಲಾಗಿದೆ. ಒಟ್ಟು 1,600 (ಕಲ್ಯಾಣ ಕರ್ನಾಟಕ ಹುದ್ದೆಗಳು- 179 ಸೇರಿದಂತೆ) ಹುದ್ದೆಗಳಿಗೆ ಈ ಪರೀಕ್ಷೆ ನಡೆಯJದೆ. ವಿಶೇಷವೆಂದರೆ, ಪರೀಕ್ಷೆ ಮುಗಿದ ಕೇವಲ ಐದೇ ದಿನಗಳಲ್ಲಿ ಕೆಇಎ ಈ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಹೊಸ ದಾಖಲೆ ಬರೆದಿದೆ.
ಪ್ರಮುಖ ದಿನಾಂಕಗಳು ಮತ್ತು ವಿವರಗಳು
- ಪರೀಕ್ಷೆ ನಡೆದ ದಿನಾಂಕ: ಸೆಪ್ಟೆಂಬರ್ 6
- ಒಎಂಆರ್ ಪ್ರತಿಗಳ ಅಪ್ಲೋಡ್: ಪರೀಕ್ಷೆ ನಡೆದ ಅಂದೇ ರಾತ್ರಿ ಕೇಂದ್ರವಾರು ವೆಬ್ಸೈಟ್ನಲ್ಲಿ ಪ್ರಕಟ
- ಕೀ ಉತ್ತರಗಳ ಪ್ರಕಟಣೆ: ಸೆಪ್ಟೆಂಬರ್ 7 (ಸೆಪ್ಟೆಂಬರ್ 9ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು)
- ಪರಿಷ್ಕೃತ ಕೀ ಉತ್ತರ ಪ್ರಕಟಣೆ: ಸೆಪ್ಟೆಂಬರ್ 10
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಅವರು ಈ ಕುರಿತು ಮಾಹಿತಿ ನೀಡಿ, ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅತಿ ಶೀಘ್ರದಲ್ಲೇ ಫಲಿತಾಂಶ ಹೊರತರಲಾಗಿದೆ ಎಂದು ತಿಳಿಸಿದ್ದಾರೆ.
ಆಕ್ಷೇಪಣೆ ಸಲ್ಲಿಕೆ ಹೇಗೆ?
ತಾತ್ಕಾಲಿಕ ಫಲಿತಾಂಶದ ಕುರಿತು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಆಕ್ಷೇಪಣೆಗಳು ಇದ್ದಲ್ಲಿ, ಸೆಪ್ಟೆಂಬರ್ 14ರ ಸಂಜೆ 5:30ರೊಳಗೆ ಅಧಿಕೃತ ವೆಬ್ಸೈಟ್ನಲ್ಲಿ ನೀಡಿರುವ ನಿಗದಿತ ಲಿಂಕ್ ಮೂಲಕ ಸೂಕ್ತ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಲು ಕೆಇಎ ಅಧಿಕೃತ ಜಾಲತಾಣವಾದ cetonline.karnataka.in ಗೆ ಭೇಟಿ ನೀಡಬಹುದು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j