ಚಿತ್ರದುರ್ಗ ಸೆ. 15
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಕಳೆದ 19 ವರ್ಷಗಳಿಂದ ನಡೆಯುತ್ತಿರುವ ಹಿಂದೂ ಮಹಾಗಣಪತಿಯ ಮಹೋತ್ಸವವೂ ಸೋಮವಾರ 20ನೇ ವರ್ಷದ ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆ ಹಾಗೂ ಪೂಜಾ ಮಹೋತ್ಸವವನ್ನು ಬೆಳಿಗ್ಗೆ 9.18 ರಿಂದ 10.45ರ ಸಮಯದಲ್ಲಿ ಮುರುಘ ರಾಜೇಂದ್ರ ಕ್ರೀಡಾಂಗಣ (ಸರ್ಕಾರಿವಿಜ್ಞಾನಕಾಲೇಜುಮೈದಾನ)ದಲ್ಲಿ ಅಸಂಖ್ಯಾತ ಭಕ್ತಾಧಿಗಳ ಸಮ್ಮುಖದಲ್ಲಿ ನಡೆಸಲಾಯಿತು.
ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಪ್ರತಿವರ್ಷ ಅತ್ಯಂತ ವಿಜೃಂಭಣೆಯಿಂದ ಹಿಂದೂ ಮಹಾಗಣಪತಿ ಮಹೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಅಕ್ಟೋಬರ್ 3 ರಂದು ಅತ್ಯಂತ ವಿಜೃಂಭಣೆಯ ಶೋಭಾಯಾತ್ರೆ ಮತ್ತು ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ . ದೇಶದ ಎರಡನೇ ಅತಿ ದೊಡ್ಡ ಹಿಂದೂ ಮಹಾಗಣಪತಿ ಉತ್ಸವ ಎಂದೇ ಹೆಸರು ಪಡೆದಿದೆ.
ಸೋಮವಾರ ನೆಡೆದ ಹಿಂದೂ ಮಹಾ ಗಣಪತಿ ಮಹೋತ್ಸವದ ಪೂಜಾ ಕಾರ್ಯಕ್ರಮದಲ್ಲಿ ನಗರದ ಶ್ರೀ ಸದ್ಗುರು ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಸ್ವಾಮಿಗಳು, ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಭಗೀರಥ ಗುರುಪೀಠದ ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಪಂಚಮಸಾಲಿ ಗುರುಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಶ್ರೀಗಳು, ಹಾಗೂ ಮಾಜಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ. ಬಸವರಾಜನ್ ಮುಖಂಡರಾದ ಬದರಿ ನಾಥ್ ಸೇರಿದಂತೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j