ರೇಷನ್ ಕಾರ್ಡ್ (Ration Card) ಇ-ಕೆವೈಸಿ (e-KYC) ಮಾಡಿಸಲು ಸರ್ವರ್ ಸಮಸ್ಯೆ ಎದುರಾಗಿದ್ದರಿಂದ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಸರ್ಕಾರವು ಇ-ಕೆವೈಸಿ ಗಡುವನ್ನು ಅಕ್ಟೋಬರ್ 20 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಈ ಕುರಿತು ಮಾಹಿತಿ ನೀಡಿದ್ದಾರೆ.
ನ್ಯಾಯಬೆಲೆ ಅಂಗಡಿಗಳ ಹೊಸ ಸಮಯ ಹಗಲು ವೇಳೆಯಲ್ಲಿ ಕೂಲಿ-ನಾಲಿ ಮಾಡುವ ಶ್ರಮಿಕರು ಪಡಿತರ ಪಡೆಯಲು ಇಡೀ ದಿನದ ದುಡಿಮೆ ಕಳೆದುಕೊಳ್ಳುವುದನ್ನು ತಪ್ಪಿಸಲು ನ್ಯಾಯಬೆಲೆ ಅಂಗಡಿಗಳ (Ration Shops) ಕಾರ್ಯನಿರ್ವಹಣಾ ಸಮಯವನ್ನು ಪರಿಷ್ಕರಿಸಲಾಗಿದೆ. ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಕಡ್ಡಾಯವಾಗಿ ಈ ಕೆಳಗಿನ ಸಮಯದಲ್ಲಿ ಕಾರ್ಯನಿರ್ವಹಿಸಬೇಕು:
- ಬೆಳಗ್ಗೆ: 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ
- ಸಂಜೆ: 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ
ಕಠಿಣ ಕ್ರಮದ ಎಚ್ಚರಿಕೆ ಬಡವರು, ಕೂಲಿ ಕಾರ್ಮಿಕರು ಹಾಗೂ ಜನಸಾಮಾನ್ಯರ ಆಹಾರ ಭದ್ರತೆಯ ಹಕ್ಕನ್ನು ಖಾತರಿಪಡಿಸಲು ಮತ್ತು ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಪಡಿತರದಾರರ ಅನುಕೂಲಕ್ಕೆ ತಕ್ಕಂತೆ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲೇಬೇಕಿದೆ. ನಿಗದಿತ ಸಮಯದಲ್ಲಿ ಅಂಗಡಿ ತೆರೆಯದೆ ಸಾರ್ವಜನಿಕರಿಗೆ ತೊಂದರೆ ಕೊಡುವ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಸಚಿವ ರಿಜ್ವಾನ್ ಅರ್ಷದ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j