ಜಿಲ್ಲಾಮಟ್ಟದ ಕ್ರೀಡಾಕೂಟ: ರಾಜ್ಯಮಟ್ಟಕ್ಕೆ ಚಿತ್ರದುರ್ಗದ ವಿದ್ಯಾ ವಿಕಾಸ ಶಾಲೆಯ ಕ್ರೀಡಾಪಟುಗಳ ಆಯ್ಕೆ

ಚಿತ್ರದುರ್ಗ: ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ (ರಾಜ್ಯ ಪಠ್ಯಕ್ರಮ ವಿಭಾಗ) ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ೧೭ ವರ್ಷದೊಳಗಿನವರ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆಗೈದು, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್ ೧೨, ೨೦೨೬ ರಂದು ಚಿತ್ರದುರ್ಗದಲ್ಲಿ ನಡೆದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್, ಚದುರಂಗ (ಚೆಸ್) ಹಾಗೂ ಟೆಕ್ವಾಂಡೋ ಸ್ಪರ್ಧೆಗಳಲ್ಲಿ ಶಾಲೆಯ ಕ್ರೀಡಾಪಟುಗಳು ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಮುಡಿಗೇರಿಸಿಕೊಂಡು ಶಾಲೆಗೆ ಕೀರ್ತಿ ತಂದಿದ್ದಾರೆ.

ವಿಜೇತ ವಿದ್ಯಾರ್ಥಿಗಳ ವಿವರ:

  • ಟೇಬಲ್ ಟೆನ್ನಿಸ್: ೯ನೇ ತರಗತಿಯ ವಿದ್ಯಾರ್ಥಿಗಳಾದ ವಿಕಾಸ್ ನಾಯಕ್, ಕುಶಾಲ್ ನಾಯಕ್ ಹಾಗೂ ನಿತೀಶ್ ಎನ್.ಎಸ್ ಅವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
  • ಚದುರಂಗ (ಚೆಸ್): ೮ನೇ ತರಗತಿಯ ಕಿರಣ್ ಪಿ.ಸಿ ಪ್ರಥಮ ಸ್ಥಾನ ಗಳಿಸಿದರೆ, ೧೦ನೇ ತರಗತಿಯ ಸಾಯಿ ಮೈತ್ರಿ ಎಲ್.ಎ ದ್ವಿತೀಯ ಸ್ಥಾನ ಪಡೆದಿದ್ದಾರೆ.
  • ಟೆಕ್ವಾಂಡೋ: ೮ನೇ ತರಗತಿ ವಿದ್ಯಾರ್ಥಿನಿ ಜ್ಞಾನೇಶ್ವರಿ ಪಿ. ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ.

ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಹೆಜ್ಜೆ ಹಾಕಿರುವ ಈ ಪ್ರತಿಭಾವಂತ ಕ್ರೀಡಾಪಟುಗಳ ಸಾಧನೆಯನ್ನು ಸಂಸ್ಥೆಯ ಕಾರ್ಯದರ್ಶಿ ಶ್ರೀ ಬಿ. ವಿಜಯ್ ಕುಮಾರ್, ನಿರ್ದೇಶಕರಾದ ಶ್ರೀ ಎಸ್.ಎಂ. ಪೃಥ್ವೀಶ್, ಶ್ರೀಮತಿ ಸುನಿತಾ ಪಿ.ಸಿ, ಐಸಿಎಸ್ಇ ಪ್ರಾಂಶುಪಾಲೆ ಬೀನಾ ಎ. ಜಾನ್, ಮುಖ್ಯೋಪಾಧ್ಯಾಯರಾದ ತಿಪ್ಪೇಸ್ವಾಮಿ ಎನ್.ಜಿ. ಹಾಗೂ ಶಾಲೆಯ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಶ್ಲಾಘಿಸಿ, ಹಾರೈಸಿದ್ದಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40

Leave a Reply

Your email address will not be published. Required fields are marked *