ಸಮಗ್ರ ಸುದ್ದಿ ಚಿತ್ರದುರ್ಗ ಸೆ. 21
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕರಾದ ಡಾ.ಕೆ.ಎಂ.ವೀರೇಶ್ರವರ ನಿಧನಕ್ಕೆ ಭೋವಿ ಅಭೀವೃದ್ದಿ ನಿಗಮ ಅಧ್ಯಕ್ಷರಾದ ಎಂ.ರಾಮಪ್ಪ ಸಂತಾಪ ಸೂಚಿಸಿ ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ನಗರದ ಜೆಸಿಆರ್ ಬಡಾವಣೆಯ ನಿವಾಸಿ, ಅ.ಭಾ.ಶ.ಸಾ.ಪ ರಾಜ್ಯ ಉಪಾಧ್ಯಕ್ಷರು, ಕಸಾಪ ಮಾಜಿ ಜಿಲ್ಲಾಧ್ಯಕ್ಷರು, ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕರಾದ ಡಾ.ಕೆ.ಎಂ.ವೀರೇಶ್ (68) ಸೆ. 20ರ ಭಾನುವಾರ ರಂದು ರಾತ್ರಿ 9 ಗಂಟೆಗೆ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಶಿಕ್ಷಣ ಪ್ರೇಮಿ, ಕಲಾ, ಸಾಹಿತ್ಯ, ಜನಾನುರಾಗಿ, ಸಂಸ್ಕೃತಿ ಚಿಂತಕರಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನಗಳನ್ನು ಚಿತ್ರದುರ್ಗದಲ್ಲಿ ಯಶಸ್ವಿಯಾಗಿ ನೆರವೇರಿಸಿದ್ದರು. ಶರಣರ ನಡೆ-ನುಡಿಗಳನ್ನು ತಮ್ಮ ಉಸಿರಾಗಿಸಿಕೊಂಡು ಸಾಹಿತ್ಯ ಲೋಕದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದರು. “ವೀರೇಶ್ ಅವರ ಸರಳತೆ, ಸಜ್ಜನಿಕೆ ಹಾಗೂ ಭಾಷಾ ಪ್ರೇಮ ಶಾಶ್ವತವಾದದ್ದು. . ಬಾಪೂಜಿ ವಿದ್ಯಾಸಂಸ್ಥೆಯ ಮೂಲಕ ಜ್ಞಾನದ ದಾರಿಯಲ್ಲಿ ನೂರಾರು ಜನರಿಗೆ ಮಾರ್ಗದರ್ಶಕರಾಗಿದ್ದ ಅವರ ನಿಧನದಿಂದ ಕಲಾವಿದರು, ಅಭಿಮಾನಿಗಳು ಹಿತೈಷಿಗಳು ಹಾಗೂ ಕನ್ನಡ ಸಾಹಿತ್ಯ ಲೋಕವೇ ಶೋಕಸಾಗರದಲ್ಲಿ ಮುಳುಗಿದೆ ಎಂದಿದ್ದಾರೆ.
ಶಿಕ್ಷಣ ಮತ್ತು, ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಅಪಾರ ಕೊಡುಗೆ ಮತ್ತು ನಿಸ್ವಾರ್ಥ ಸೇವೆ ಸದಾ ಸ್ಮರಣೀಯ. ಅವರ ಮಾರ್ಗದರ್ಶನ ಹಾಗೂ ದಕ್ಷ ನಾಯಕತ್ವ ನಾಡಿಗೆ, ವಿಶೇಷವಾಗಿ ಸಾಹಿತ್ಯ ಲೋಕಕ್ಕೆ ದೊಡ್ಡ ಶಕ್ತಿಯಾಗಿತ್ತು. ಅವರ ಅಗಲಿಕೆಯು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.