ಚಿತ್ರದುರ್ಗ ಅ. 01
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದವತಿಯಿಂದ ಪ್ರತಿ ವರ್ಷ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ ಹಿಂದೂ ಮಹಾಗಣಪತಿ ಮಹೋತ್ಸವದ ಅಂಗವಾಗಿ ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಗುರುವಾರ ನಗರದಲ್ಲಿ ಬೈಕ್ ರ್ಯಾಲಿಯನ್ನು ನಗರದ ವಿವಿಧ ಬಡಾವಣೆಗಳಲ್ಲಿ ನಡೆಸಲಾಯಿತು.
ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಕನಕ ವೃತ್ತದಲ್ಲಿ ಇಂದು ಮುಂಜಾನೆ 10 ಗಂಟೆ ಸಮಯದಲ್ಲಿ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಗೆ ಬಜರಂಗದಳದ ಕರ್ನಾಟಕ ದಕ್ಷಿಣದ ಪ್ರಾಂತ ಸಂಯೋಜಕ್ ಪ್ರಭಂಜನ್ ಸೂರ್ಯ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾದಾರ ಗುರು ಪೀಠದ ಡಾ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು, ಮಾಜಿ ಶಾಸಕರುಗಳಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಬಿಜೆಪಿಯ ಉಮೇಶ್ ಕಾರಜೋಳ, ಅನಿತ್ ಕುಮಾರ್, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಚನ್ನಕೇಶವ, ಶಶಿಧರ್ ಬಸಮ್ಮ, ಬಿ.ಜಯ್ಯಪ್ಪ, ಹಿಂದೂ ಮಹಾ ಗಣಪತಿ ಸಮಿತಿಯ ಅಧ್ಯಕ್ಷರಾದ ಜಿ.ಆರ್.ಸುದೀರ್, ನಗರಾಭೀವೃದ್ದಿ ಪ್ರಾಧಿಕಾರ ಮಾಜಿ ಅಧ್ಯಕ್ಷರಾದ ಬದರಿನಾಥ್, ಅಶೋಕ್ ಕುಮಾರ್, ಕಾರ್ತಿಕ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಪ್ರಾರಂಭಗೊಂಡ ಬೈಕ್ ರ್ಯಾಲಿ ಸಂಗೊಳ್ಳಿ ರಾಯಣ್ಣ ವೃತ್ತ, ಬುರುಜನಹಟ್ಟಿ ಸರ್ಕಲ್, ಆನೆಬಾಗಿಲು, ಕೋಟೆ ರಸ್ತೆ, ಶ್ರೀ ಏಕನಾಥೇಶ್ವರಿ ಪಾದಗಟ್ಟೆ ವೃತ್ತ, ಕರುವಿನಕಟ್ಟೆ, ಜೋಗಿಮಟ್ಟಿ ರಸ್ತೆ, ಜಟ್‍ಪಟ್ ನಗರ, ಸ್ಟೇಡಿಯಂ ರಸ್ತೆ, ಬಿ.ಡಿ. ರಸ್ತೆ, ಮದಕರಿ ವೃತ್ತ, ಗಾಂಧಿ ವೃತ್ತ, ಎನ್.ಹೆಚ್.-4 ಸರ್ವಿಸ್ ರಸ್ತೆ, ಜೆ.ಸಿ.ಆರ್. ರಸ್ತೆ, ವಾಸವಿ ವೃತ್ತ, ಡಿ.ಸಿ. ವೃತ್ತ, ಅಂಬೇಡ್ಕರ್ ವೃತ್ತದ ಮುಖಾಂತರ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಬೈಕ್‍ರ್ಯಾಲಿ ಮುಕ್ತಾಯವಾಯಿತು.
ಈ ಸಂದರ್ಭದಲ್ಲಿ ಸುಮಾರು 300 ರಿಂದ 500 ಬೈಕ್‍ಗಳಲ್ಲಿ ಯುವ ಜನತೆ ಭಾಗವಹಿಸಿದ್ದರು
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j