ಚಿತ್ರದುರ್ಗ ಅ. 02
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್‍ನ ಜಿಲ್ಲಾ ಜವಾಹರ್ಲಾಲ್ ಮಂಚ್ ಘಟಕದ ನೂತನವಾಗಿ ಜಿಲ್ಲಾಧ್ಯಕ್ಷರಾಗಿ ಆಯ್ಕಯಾದ ಜಿ.ದಾದಾಪೀರ್‍ರವರು ಮಹಾನ್ ದೇಶಪ್ರೇಮಿಗಳಾದ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಹಾಗೂ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಪುಣ್ಯ ಪುರುಷರುಗಳ ಜಯಂತಿ ದಿನದಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಅಧಿಕಾರವನ್ನು ಸ್ವೀಕಾರ ಮಾಡಿದರು.
ಡಿಸಿಸಿ ಜಿಲ್ಲಾಧ್ಯಕ್ಷರಾದ ತಾಜ್‍ಪೀರ್ ಹಾಗೂ ಜಿಲ್ಲಾ ಜವಾಹರ್ಲಾಲ್ ಮಂಚ್ ಘಟಕದ ಹಿಂದಿನ ಅಧ್ಯಕ್ಷರಾದ ನಾಗರಾಜ್ ಪೈಲಟ್ ರವರಿಂದ ಕಾಂಗ್ರೆಸ್ ಭಾವುಟವನ್ನು ಸ್ವೀಕಾರ ಮಾಡುವುದರ ಮೂಲಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಈ ಸಮಯದಲ್ಲಿ ಕುಮಾರಗೌಡ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉಲ್ಲಾಸ್ ಕಾರೇಹಳ್ಳಿ ಡಿಸಿಸಿಯ ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್ ಕುಮಾರ್, ಮೈಲಾರಪ್ಪ, ಉಪಾಧ್ಯಕ್ಷರಾದ ರವಿಕುಮಾರ್, ಗ್ಯಾರೆಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಶಿವಣ್ಣ ಗಂಜಿಗಟ್ಟೆ, ಮದುಗೌಡ, ಸೇವಾದಳದ ಭೋತೇಶ್, ನ್ಯಾಯಾವಾದಿ ಸುದರ್ಶನ್, ಜಗದೀಶ್, ನಗರಾಧ್ಯಕ್ಷ ಲಕ್ಷ್ಮೀಕಾಂತ್, ಚೋಟು, ಖುದ್ದುಸ್, ಸಂದೀಪ್, ಅಲ್ಲಾಭಕ್ಷ್ಮೀ, ಎಸ್.ಟಿ. ಘಟಕದ ಅಧ್ಯಕ್ಷ ಮಂಜುನಾಥ್, ಸೇರಿದಂತೆ ಇತರರು ಭಾಗವಹಿಸಿದ್ದರು.
ಇದಕ್ಕೂ ಮುನ್ನಾ ನಗರಾಭೀವೃದ್ದಿ ಪ್ರಾಧಿಕಾರ ಮಾಜಿ ಅಧ್ಯಕ್ಷರಾದ ಆರ್.ಕೆ.ಸರ್ದಾರ್‍ರವರು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್‍ನ ಜಿಲ್ಲಾ ಜವಾಹರ್ಲಾಲ್ ಮಂಚ್ ಘಟಕದ ನೂತನವಾಗಿ ಜಿಲ್ಲಾಧ್ಯಕ್ಷರಾಗಿ ಆಯ್ಕಯಾದ ಜಿ.ದಾದಾಪೀರ್‍ರವರಿಗೆ ಶಾಲು ಹಾರ ಹಾಕಿ ಸನ್ಮಾನಿಸಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j