ಸಮಗ್ರ ಸುದ್ದಿ, ಚಿತ್ರದುರ್ಗ
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಲು ಯತ್ನಿಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಅಧಿಕಾರಿಗಳಿಗೆ ದೂರು ನೀಡಲಾಗಿದೆ.

ಇತ್ತೀಚೆಗೆ ನಗರದ ಕೆಲ ವ್ಯಕ್ತಿಗಳು ಫಾರಂ-7 ಸಲ್ಲಿಸುವ ಮೂಲಕ ಸುಮಾರು 2,372 ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸಿಹಾಕಲು ಸಂಚು ರೂಪಿಸಿದ್ದಾರೆ ಎಂದು ಮುಖಂಡರು ಆರೋಪಿಸಿದ್ದಾರೆ. ಈ ಕುರಿತು ಸಮಗ್ರ ತನಿಖೆ ನಡೆಸಿ, ಕುತಂತ್ರ ರೂಪಿಸಿರುವವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಸೈಯದ್ ಖುದ್ದೂಸ್ ಅವರ ನೇತೃತ್ವದಲ್ಲಿ ಈ ಮನವಿ ಸಲ್ಲಿಸಲಾಗಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಮೈಲಾರಪ್ಪ, ಸಂಪತ್ ಕುಮಾರ್, ನಗರಸಭೆ ಸದಸ್ಯರಾದ ಶಬ್ಬೀರ್ ಭಾಷಾ, ಸುದರ್ಶನ್, ಮುದಸ್ಸಿರ್ ನವಾಜ್, ಜಮೀರ್, ಉಸ್ಮಾನ್, ಪಿಲ್ಲಹಳ್ಳಿ ಜಯಪ್ಪ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
🟠 Instagram
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು