ವಿಕಸಿತ ಭಾರತ ಸಂಕಲ್ಪ: ಚಿತ್ರದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸೇವಾ ಜ್ಯೋತಿ ಪಾದಯಾತ್ರೆ.

ಚಿತ್ರದುರ್ಗ:

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಆಡಳಿತ ಹಾಗೂ ‘ವಿಕಸಿತ ಭಾರತ–2047’ ಸಂಕಲ್ಪವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷದ ವತಿಯಿಂದ ಚಿತ್ರದುರ್ಗ ನಗರದಲ್ಲಿ ಸೇವಾ ಜ್ಯೋತಿ ಯಾತ್ರೆ ನಡೆಸಲಾಯಿತು.

ನಗರದ ವಾಲ್ಮೀಕಿ ಸಮುದಾಯ ಭವನದಿಂದ ಆರಂಭವಾದ ಸೇವಾ ಜ್ಯೋತಿ ಪಾದಯಾತ್ರೆ ಗಾಂಧಿವೃತ್ತದ ಮೂಲಕ ಸಾಗಿದ್ದು, ಅಲ್ಲಿರುವ ಶ್ರೀ ನೀಲಕಂಠೇಶ್ವರ ದೇವಸ್ಥಾನದವರೆಗೆ ನಡೆಯಿತು. ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿ ಸೇವಾ ಸಂಕಲ್ಪವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ, ಶಾಸಕ ಡಾ. ಎಂ. ಚಂದ್ರಪ್ಪ, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ್, ಮಾಧುರಿ ಗೀರೀಶ್, ವೆಂಕಟೇಶ್ ಯಾದವ್, ದಾವಣಗೆರೆ ವಿಭಾಗ ಸಹಪ್ರಭಾರಿ ಎ. ಮುರಳಿ, ಮುಖಂಡರಾದ ರಾಜಣ್ಣ, ಮಾಧ್ಯಮ ವಕ್ತಾರ ನಾಗರಾಜ್ ಬೇದ್ರೆ, ಪಾಪನಾಯ್ಕ್, ಅನಿಲ್ ಕುಮಾರ್, ಡಾ. ಮಂಜುನಾಥ್ ಸೇರಿದಂತೆ ಬಿಜೆಪಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವನ್ನು ‘ವಿಕಸಿತ ಭಾರತ–2047’ರತ್ತ ಕೊಂಡೊಯ್ಯುವ ಸಂಕಲ್ಪದೊಂದಿಗೆ ಸೇವಾ ಜ್ಯೋತಿ ಯಾತ್ರೆ ಆಯೋಜಿಸಲಾಗಿತ್ತು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
🟠 Instagram
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *