ಸಮಗ್ರ ಸುದ್ದಿ: ನಿಖರತೆಗೆ ಮತ್ತೊಂದು ಹೆಸರು
ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳಿಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ, ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಮೀಸಲಾತಿ ಹೆಚ್ಚಳಕ್ಕೆ ದೊಡ್ಡ ಹಿನ್ನಡೆಯಾಗಿದೆ.
ನ್ಯಾಯಾಲಯದ ಆದೇಶವೇನು? ರಾಜ್ಯದಲ್ಲಿ ಶೈಕ್ಷಣಿಕ ಸಂಸ್ಥೆಗಳು ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪ್ರಮಾಣವನ್ನು ಶೇ. 50ರಿಂದ ಶೇ. 56ಕ್ಕೆ ಏರಿಸಲಾಗಿತ್ತು. ‘ಕರ್ನಾಟಕ ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿ ಅಧಿನಿಯಮ–2022’ರ ಅಡಿ ತರಲಾಗಿದ್ದ ಈ ಕಾಯ್ದೆಯನ್ನು ಪ್ರಶ್ನಿಸಿ ಮಹೇಂದ್ರ ಕುಮಾರ್ ಮಿತ್ರಾ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು, ಮೀಸಲಾತಿ ಹೆಚ್ಚಳದ ಸರ್ಕಾರದ ಆದೇಶವನ್ನು ಅಮಾನ್ಯಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.
ಮೀಸಲಾತಿ ಹೆಚ್ಚಳದ ಹಿನ್ನೆಲೆ ಏನಿತ್ತು? ರಾಜ್ಯದಲ್ಲಿ ಈ ಹಿಂದೆ ಎಸ್‌ಸಿ ಸಮುದಾಯಕ್ಕೆ ಶೇ. 15 ಹಾಗೂ ಎಸ್‌ಟಿ ಸಮುದಾಯಕ್ಕೆ ಶೇ. 3ರಷ್ಟು ಮೀಸಲಾತಿ ಇತ್ತು. ಆದರೆ, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಪರಿಷ್ಕರಿಸಬೇಕು ಎಂದು ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಸಮಿತಿಯು ಸರ್ಕಾರಕ್ಕೆ ವರದಿ ನೀಡಿತ್ತು. ಎಸ್‌ಸಿ ಕೋಟಾವನ್ನು ಶೇ. 15ರಿಂದ ಶೇ. 17ಕ್ಕೆ ಹಾಗೂ ಎಸ್‌ಟಿ ಕೋಟಾವನ್ನು ಶೇ. 3ರಿಂದ ಶೇ. 7ಕ್ಕೆ ಏರಿಸುವಂತೆ ಸಮಿತಿ ಶಿಫಾರಸು ಮಾಡಿತ್ತು.
ಈ ವರದಿಯನ್ನು ಆಧರಿಸಿ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ಸಮ್ಮತಿ ಸೂಚಿಸಿದ್ದವು. ತರುವಾಯ, ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟವು ಮೀಸಲಾತಿ ಹೆಚ್ಚಳದ ಕರಡು ವಿಧೇಯಕಕ್ಕೆ ಒಪ್ಪಿಗೆ ನೀಡಿ, ಸುಗ್ರೀವಾಜ್ಞೆ ಹೊರಡಿಸಿತ್ತು. ರಾಜ್ಯಪಾಲರ ಅಂಕಿತದ ಬಳಿಕ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸುವ ಮೂಲಕ ಅಧಿಕೃತವಾಗಿ ಜಾರಿಗೆ ತರಲಾಗಿತ್ತು.
ಒಟ್ಟು 159 ಉಪಜಾತಿಗಳಿಗೆ ಅನ್ವಯವಾಗಿತ್ತು: ಮೀಸಲಾತಿ ಹೆಚ್ಚಳದ ಈ ಕಾಯ್ದೆಯು ಎಸ್‌ಸಿ ವರ್ಗದ 103 ಉಪಜಾತಿಗಳು ಹಾಗೂ ಎಸ್‌ಟಿ ವರ್ಗದ 56 ಉಪ ಪಂಗಡಗಳನ್ನು ಒಳಗೊಂಡಿತ್ತು. ಆದರೆ, ಸುಪ್ರೀಂಕೋರ್ಟ್‌ನ ನಿಯಮಾವಳಿಯಂತೆ ಒಟ್ಟು ಮೀಸಲಾತಿ ಪ್ರಮಾಣವು ಶೇ. 50ರ ಮಿತಿಯನ್ನು ಮೀರಬಾರದು ಎಂಬ ನಿಯಮವಿದೆ. ಮೀಸಲಾತಿ ಪ್ರಮಾಣವು ಶೇ. 56ಕ್ಕೆ ತಲುಪಿದ್ದರಿಂದ, ಇದನ್ನು ಒಂಬತ್ತನೇ ಶೆಡ್ಯೂಲ್‌ಗೆ ಸೇರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರವನ್ನೂ ಬರೆದಿತ್ತು. ಇದೀಗ ಹೈಕೋರ್ಟ್ ಈ ಕಾಯ್ದೆಯನ್ನೇ ರದ್ದುಗೊಳಿಸಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
🟠 Instagram
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು