ಅಕ್ಟೋಬರ್ 13: ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಹಿರಿಯ ನಾಯಕಿ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದಾರೆ. ಕಳೆದ ಐದು ವರ್ಷಗಳಿಂದ (2021) ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಥಾವರ್ ಚಂದ್ ಗೆಹ್ಲೋಟ್ ಅವರ ಸ್ಥಾನವನ್ನು ಸುಧಾ ಯಾದವ್ ತುಂಬಲಿದ್ದಾರೆ. ಈ ಮೂಲಕ ಅವರು ಕರ್ನಾಟಕ ರಾಜ್ಯದ ಎರಡನೇ ಮಹಿಳಾ ರಾಜ್ಯಪಾಲರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಯಾರು ಈ ಡಾ. ಸುಧಾ ಯಾದವ್? ಮೂಲತಃ ಹರಿಯಾಣದ ರೇವಾರಿ ಜಿಲ್ಲೆಯ ಮೊಟ್ಲಾ ಕಲನ್ ಗ್ರಾಮದವರಾದ ಸುಧಾ ಯಾದವ್ ಅವರು 1965ರ ಅಕ್ಟೋಬರ್ 16ರಂದು ಜನಿಸಿದರು. ವಿದ್ಯಾಭ್ಯಾಸದಲ್ಲಿ ಅತ್ಯಂತ ಮುಂದಿದ್ದ ಇವರು, ಐಐಟಿ ರೂರ್ಕಿಯಿಂದ ಎಂಎಸ್ಸಿ ಪದವಿ ಹಾಗೂ ರಸಾಯನಶಾಸ್ತ್ರದಲ್ಲಿ ಪಿಎಚ್ಡಿ (Ph.D) ಪೂರೈಸಿದ್ದಾರೆ.
ಇವರ ಪತಿ ಸುಖಬೀರ್ ಸಿಂಗ್ ಯಾದವ್ ಅವರು ಗಡಿ ಭದ್ರತಾ ಪಡೆಯಲ್ಲಿ (BSF) ಡೆಪ್ಯುಟಿ ಕಮಾಂಡೆಂಟ್ ಆಗಿ ದೇಶಸೇವೆ ಮಾಡುತ್ತಿದ್ದರು. 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಸುಖಬೀರ್ ಸಿಂಗ್ ಅವರು ಹುತಾತ್ಮರಾದರು. ಪತಿಯ ಬಲಿದಾನದ ನಂತರ ಸುಧಾ ಯಾದವ್ ಅವರು ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಬಳಿಕ ರಾಜಕೀಯ ಪ್ರವೇಶಿಸಿದರು.
ರಾಜಕೀಯ ಹಾದಿ ಹಾಗೂ ಸಾಧನೆ: ಭಾರತೀಯ ಜನತಾ ಪಕ್ಷದ ಪ್ರಬಲ ನಾಯಕಿಯಾಗಿ ಬೆಳೆದ ಸುಧಾ ಯಾದವ್, 1999ರ ಲೋಕಸಭಾ ಚುನಾವಣೆಯಲ್ಲಿ ಹರಿಯಾಣದ ಮಹೇಂದ್ರಗಢ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ತಮ್ಮ ಚೊಚ್ಚಲ ಚುನಾವಣೆಯಲ್ಲೇ ಕಾಂಗ್ರೆಸ್ನ ಪ್ರಭಾವಿ ನಾಯಕ ರಾವ್ ಇಂದ್ರಜಿತ್ ಸಿಂಗ್ ಅವರನ್ನು ಮಣಿಸಿ ಸಂಸದರಾಗಿ ಆಯ್ಕೆಯಾಗುವ ಮೂಲಕ ಇಡೀ ದೇಶದ ಗಮನ ಸೆಳೆದಿದ್ದರು.
ಪಕ್ಷದಲ್ಲಿ ಹಲವು ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿರುವ ಇವರು, 2015ರಲ್ಲಿ ಬಿಜೆಪಿ ಒಬಿಸಿ ಮೋರ್ಚಾದ ಪ್ರಭಾರಿಯಾಗಿ ನೇಮಕಗೊಂಡಿದ್ದರು. 2022ರ ಆಗಸ್ಟ್ನಲ್ಲಿ ಬಿಜೆಪಿಯ ಅತ್ಯುನ್ನತ ಸಮಿತಿಗಳಾದ ಸಂಸದೀಯ ಮಂಡಳಿ (Parliamentary Board) ಹಾಗೂ ಕೇಂದ್ರ ಚುನಾವಣಾ ಸಮಿತಿಗೆ ಇವರನ್ನು ನೇಮಿಸಲಾಯಿತು. ವಿಶೇಷವೆಂದರೆ, ಹಿರಿಯ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಅವರ ನಂತರ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದ ಏಕೈಕ ಮಹಿಳಾ ನಾಯಕಿ ಎಂಬ ಕೀರ್ತಿ ಡಾ. ಸುಧಾ ಯಾದವ್ ಅವರಿಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು