ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಬೆಂಬಲಿಸುವಂತೆ ಎಸ್.ಕೆ. ಬಸವರಾಜನ್ ಮನವಿ

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್

ಚಿತ್ರದುರ್ಗ ಅ. 15: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಎನ್‍ಡಿಎ. ಮೈತ್ರಿ ಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಂ.ಸುರೇಶ್‍ರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಜಯಶಾಲಿಯನ್ನಾಗಿ ಮಾಡುವಂತೆ ಮಾಜಿ ಶಾಸಕರು, ಬಿಜೆಪಿ ಮುಖಂಡರಾದ ಎಸ್.ಕೆ.ಬಸವರಾಜನ್ ಉಪನ್ಯಾಸಕರು, ಶಿಕ್ಷಕರು ಹಾಗೂ ಪದವೀಧರ ಮತದಾರರಲ್ಲಿ ಮನವಿ ಮಾಡಿದರು.

ಚಿತ್ರದುರ್ಗ ನಗರದಲ್ಲಿ ಎಸ್.ಜೆ.ಎಂ. ವಿವಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿದ್ಯಾ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ  ಪದವೀಧರರ ಮತದಾರರನ್ನು ಭೇಟಿ ಮಾಡಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಎನ್‍ಡಿಎ. ಮೈತ್ರಿ ಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಂ.ಸುರೇಶ್‍ರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಜಯಶಾಲಿಯನ್ನಾಗಿ ಮಾಡುವಂತೆ ಮನವಿ ಮಾಡಿ  ಅಖಂಡ ಚಿತ್ರದುರ್ಗ ಜಿಲ್ಲೆಯ ಒಂಬತ್ತು ತಾಲ್ಲೂಕುಗಳಲ್ಲಿರುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಳನ್ನು ನೀಡಿ ಕೆ.ಎಂ.ಸುರೇಶ್‍ರವರನ್ನು ಜಯಶಾಲಿಯನ್ನಾಗಿಸಬೇಕಿದೆ ಪದವೀಧರರ ಸಮಸ್ಯೆಗಳಿಗೆ ವಿಧಾನಸಭೆಯಲ್ಲಿ ಧ್ವನಿ ಎತ್ತಲಿದ್ದಾರೆಂಬ ವಿಶ್ವಾಸ ವ್ಯಕ್ತಪಡಿಸಿದ ಬಸವರಾಜನ್  ಜಿಲ್ಲೆಯ ಅಸ್ಮಿತೆ ಹಾಗೂ ಸ್ವಾಭಿಮಾನವನ್ನು ಉಳಿಸಿಕೊಳ್ಳಬೇಕಾಗಿರುವುದರಿಂದ ಅ.23 ರಂದು ನಡೆಯುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್‍ಡಿಎ. ಮೈತ್ರಿ ಕೂಟದ ಅಭ್ಯರ್ಥಿ ಕೆ.ಎಂ.ಸುರೇಶ್‍ಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಪದವೀಧರರು, ಉಪನ್ಯಾಸಕರು, ಶಿಕ್ಷಕರಗಳಲ್ಲಿ ವಿನಂತಿಸಿದರು.

ಪದವೀಧರರ ಕ್ಷೇತ್ರದ ಚುನಾವಣೆಯು ಬುದ್ಧಿವಂತರ ಕ್ಷೇತ್ರವಾಗಿದ್ದು, ಈ ಚುನಾವಣೆಯಲ್ಲಿ ಪದವೀಧರ ಮತದಾರರು ಮಾತ್ರ ಮತ ಚಲಾಯಿಸಲು ಅವಕಾಶವಿರುತ್ತದೆ . ಈ ಮೂಲಕ ಆಯ್ಕೆಯಾಗುವ ವ್ಯಕ್ತಿಯು ವಿಧಾನ ಪರಿಷತ್ತಿನ ಸದಸ್ಯರಾಗಿ ಪದವೀಧರರ ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಈ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕೆ.ಎಂ. ಸುರೇಶ್ ಅವರು ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆ ಹಾಗೂ ಆಸ್ಪತ್ರೆ ಯನ್ನು ನಡೆಸುತ್ತಿದ್ದಾರೆ.   ಅವರು ಕಳೆದ ಮೂವತ್ತರಿಂದ ನಲವತ್ತು ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.   ಸುರೇಶ್ ಅವರು ಬಹಳ ಸರಳವಾದ ವ್ಯಕ್ತಿಯಾಗಿದ್ದು, ಸಾರ್ವಜನಿಕರಿಗೆ ಯಾವಾಗಲೂ ಫೋನ್ ಮೂಲಕ ಸುಲಭವಾಗಿ ಸಿಗುವ ವ್ಯಕ್ತಿಯಾಗಿದ್ದಾರೆ.   ಅವರು ಗೆದ್ದ ನಂತರ ಮತ್ತೊಮ್ಮೆ ಎಲ್ಲರನ್ನೂ ಭೇಟಿ ಮಾಡಿ ಪರಿಚಯ ಮಾಡಿಸಿಕೊಡುವುದಾಗಿ ಹಾಗೂ ಕೇವಲ ಚುನಾವಣೆಗೆ ಮಾತ್ರವಲ್ಲದೆ ನೇರವಾದ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ.   

ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಸ್ಪರ್ಧಿಸಿರುವ ಸುದೀರ್ಘ ಸಾಮಾಜಿಕ ಸೇವಾ ಹಿನ್ನೆಲೆಯುಳ್ಳ ಕೆ.ಎಂ. ಸುರೇಶ್ ಅವರನ್ನು ಗೆಲ್ಲಿಸುವ ಮೂಲಕ ಕೇಂದ್ರ ಸರ್ಕಾರದ ನಾಯಕತ್ವವನ್ನು ಬಲಪಡಿಸಬೇಕು ಹಾಗೂ ನಮ್ಮ ನೆಚ್ಚಿನ ಪ್ರಧಾನಿಯಾದ ನರೇಂದ್ರ ಮೋದಿ ಅವರ ಕೈಯನ್ನು ಬಲಪಡಿಸಬೇಕು ಎಂದು ಮನವಿ ಮಾಡಿದ್ದಾರೆ.   

ಈ ಸಂದರ್ಭದಲ್ಲಿ ಪ್ರಾಂಶುಪಾಲರುಗಳಾದ ದಿನೇಶ್, ರಘುವಂಶಿ, ಈಶ್ವರಪ್ಪ, ರಾಜಶೇಖರ ನಾಗಪ್ಪ, ಮಂಜುಳ, ಶೇಖರ್, ಜಯ್ಯಣ್ಣ, ಚಿನ್ನಯ್ಯ, ನೀಲಕಂಠಚಾರ್, ವೀರಣ್ಣ ರೇವಣಸಿದ್ದಪ್ಪ ಗುರು ಹಾಜರಿದ್ದರು, 

ನಿಮ್ಮ ಮನೆಗೆ ಉಪಯುಕ್ತವಾದ ಗೃಹೋಪಯೋಗಿ ಸಾಧನ!
ಮನೆಯ ದೈನಂದಿನ ಕೆಲಸಗಳನ್ನು ಸುಲಭಗೊಳಿಸಲು ಈ ಉತ್ಪನ್ನವು ನಿಮಗೆ ಸಹಾಯಕವಾಗಬಹುದು. ಇದರ ವೈಶಿಷ್ಟ್ಯಗಳು, ಬೆಲೆ ಮತ್ತು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
👉 ಉತ್ಪನ್ನದ ಸಂಪೂರ್ಣ ಮಾಹಿತಿ ಮತ್ತು ಖರೀದಿಗಾಗಿ ಇಲ್ಲಿ ಕ್ಲಿಕ್ ಮಾಡಿ⁠�

https://link.amazon/B0dmPSfpi

https://link.amazon/B02HRaQOo

Leave a Reply

Your email address will not be published. Required fields are marked *