ಕನ್ನಡ ಶಾಲೆಗಳ ಉಳಿವಿಗೆ ಮತ್ತು ಕನ್ನಡ ಭಾಷೆ ಬೆಳೆಸಲು ಸಾಮೂಹಿಕ ಸಂಕಲ್ಪ ಅಗತ್ಯ: ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಆ. 17 ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು, ಕನ್ನಡ ಶಿಕ್ಷಕರಿಗೆ ಇತರೆ ಕೆಲಸಗಳನ್ನು ನೀಡದೆ ಕೇವಲ ಬೋಧನೆಗೆ ಅವಕಾಶ ಕಲ್ಪಿಸುವುದು ಹಾಗೂ ಪಾಶ್ಚಾತ್ಯ ಸಂಸ್ಕೃತಿಯ ವ್ಯಾಮೋಹದಿಂದ ಮಕ್ಕಳನ್ನು ಮುಕ್ತಗೊಳಿಸಿ ಸುಸಂಸ್ಕೃತರನ್ನಾಗಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕನ್ನಡ ಸಾಹಿತ್ಯ ಪರಿಷತ್‍ನ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ ತಿಳಿಸಿದ್ದಾರೆ.


ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮಕ್ಕಳಲ್ಲಿ ಕನ್ನಡ ಭಾಷೆಯ ಮೇಲಿನ ಒಲವು ಕಡಿಮೆಯಾಗುತ್ತಿದ್ದು, ಅಕ್ಷರಗಳ ಉಚ್ಚಾರಣೆಯೂ ತಪ್ಪುತ್ತಿದೆ. ರಾಜ್ಯದಲ್ಲಿ ಒಟ್ಟು 48,844 ಕನ್ನಡ ಸರ್ಕಾರಿ ಶಾಲೆಗಳಿದ್ದು, 1.25 ಕೋಟಿ ಮಕ್ಕಳು ಓದುತ್ತಿದ್ದಾರೆ. ಆದರೆ, ಮೂಲಭೂತ ಸೌಕರ್ಯಗಳ ಕೊರತೆ ಮತ್ತು ನಿರ್ಲಕ್ಷ್ಯದಿಂದಾಗಿ ಸುಮಾರು 6,000 ಶಾಲೆಗಳು ಮುಚ್ಚಲ್ಪಟ್ಟಿವೆ ಎಂದು ಆರೋಪಿಸಿ ರಾಜ್ಯದ ಶಾಲೆಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಸರಿಪಡಿಸಿ, ಲಕ್ಷಾಂತರ ಜನರ ಕೈಜೋಡಿಸುವ ಮೂಲಕ ರಾಜ್ಯದ ಎಲ್ಲಾ ಶಾಲೆಗಳನ್ನು ಉತ್ತಮಪಡಿಸಬೇಕಾಗಿದೆ ಕನ್ನಡದ ಹಿತಾಸಕ್ತಿ ಹಾಗೂ
ಮಕ್ಕಳ ಭವಿಷ್ಯಕ್ಕಾಗಿ ತಾವು ಹತ್ತು ಪ್ರಮುಖ ಸಂಕಲ್ಪಗಳನ್ನು ಮಾಡಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರ ಬೆಂಬಲ ಕೋರಿದರು.

ಕನ್ನಡ ಶಾಲೆಗಳಲ್ಲಿ ಸುಮಾರು ಎರಡು ಲಕ್ಷ ಕನ್ನಡ ಶಿಕ್ಷಕರು ಇದ್ದು, ಅವರಿಗೆ ಬೋಧನೆ ಹೊರತುಪಡಿಸಿ ಇತರೆ ಕೆಲಸಗಳನ್ನು ನೀಡುವುದರಿಂದ ಕನ್ನಡ ಕಲಿಕೆಗೆ ಹಿನ್ನಡೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿ ಶಿಕ್ಷಕರಿಗೆ ಬೇರೆ ಕೆಲಸಗಳನ್ನು ನೀಡುವುದನ್ನು ನಿಲ್ಲಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ಸಿಗುವಂತೆ ಮಾಡಬೇಕು ಪಾಶ್ಚಾತ್ಯ ಸಂಸ್ಕೃತಿಯ ವ್ಯಾಮೋಹ ಹೆಚ್ಚಾಗುತ್ತಿದ್ದು, ಇಂದಿನ ಮಕ್ಕಳು ಮೊಬೈಲ್ ಹಾಗೂ ಇತರೆ ಚಟಗಳಿಗೆ ಬಲಿಯಾಗಿ ಹಾಳಾಗುತ್ತಿದ್ದಾರೆ ಕನ್ನಡ ನಾಡು, ನುಡಿ ಹಾಗೂ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ತಾವು ಹತ್ತು ಪ್ರಮುಖ ಸಂಕಲ್ಪಗಳನ್ನು ಮಾಡಿದ್ದು, ಈಗಾಗಲೇ ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ
ತಮಗೆ ಅಧಿಕಾರ ಅಥವಾ ಸ್ಥಾನ ಸಿಕ್ಕರೆ ಈ ಕಾರ್ಯಗಳನ್ನು ಇನ್ನಷ್ಟು ಸಮರ್ಥವಾಗಿ ಮಾಡಲು ಸಾಧ್ಯವಾಗ ಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮಕ್ಕಳನ್ನು ಸರಿಯಾದ ಮಾರ್ಗದಲ್ಲಿ ಮುನ್ನಡೆಸಿ, ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ರೂಪಿಸಲಾಗಿರುವ ಹತ್ತು ಸಂಕಲ್ಪಗಳ ಈಡೇರಿಕೆಗೆ ಸಾರ್ವಜನಿಕರು ಬೆಂಬಲಿಸಬೇಕು
ರಾಜ್ಯದಲ್ಲಿ ಕನ್ನಡ ಶಾಲೆಗಳ ಸಂಖ್ಯೆ ಕುಸಿಯುತ್ತಿರುವುದು ಹಾಗೂ ಮಕ್ಕಳು ಕನ್ನಡ ಮಾತನಾಡಲು ಹಿಂಜರಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಕನ್ನಡ ಭಾಷೆ ಮತ್ತು ಶಾಲೆಗಳನ್ನು ಉಳಿಸಲು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಕೇವಲ ಶೇ. 28 ರಷ್ಟು ಜನರು ಮಾತ್ರ ಕನ್ನಡ ಮಾತನಾಡುತ್ತಿದ್ದಾರೆ ಖಾಸಗಿ ಶಾಲೆಗಳಲ್ಲಿ ಸೌಕರ್ಯವಿದ್ದರೂ ಅಲ್ಲಿ ಕನ್ನಡದ ಗಂಧಗಾಳಿಯಿಲ್ಲ ಮುಂದಿನ ಪೀಳಿಗೆಗೆ ಕನ್ನಡದ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪರಿಚಯಿಸುವುದು ನಮ್ಮೆಲ್ಲರ ಕರ್ತವ್ಯ ಕನ್ನಡ ಶಾಲೆಗಳನ್ನು ದತ್ತು ಪಡೆದು, ಅಲ್ಲಿ ವರ್ಷಕ್ಕೆ 8 ರಿಂದ 10 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ವಚನ, ಜೈನ, ದಾಸ ಹಾಗೂ ಜನಪದ ಸಾಹಿತ್ಯದ ಸೊಗಡನ್ನು ಮುಂದಿನ ಪೀಳಿಗೆಗೆ ತಲುಪಿಸದಿದ್ದರೆ ಭಾಷೆ ಅಳಿದುಹೋಗುತ್ತದೆ ಎಂದು ಎಚ್ಚರಿಸಿ ಕನ್ನಡ ಶಾಲೆಗಳನ್ನು ಉಳಿಸಿ, ಕನ್ನಡ ಮಾತನಾಡುವ ಮಕ್ಕಳನ್ನು ಬೆಳೆಸುವ ಮೂಲಕ ರಾಜ್ಯದಲ್ಲಿ ಕನ್ನಡದ ಅಸ್ಮಿತೆಯನ್ನು ಕಾಪಾಡಿಕೊಳ್ಳುವುದು ಎಲ್ಲರ
ಜವಾಬ್ದಾರಿಯಾಗಿದೆ ಎಂದರು.

ಗೋಷ್ಟಿಯಲ್ಲಿ ಶ್ರೀಮತಿ ಭಾರ್ಗವಿ ದ್ರಾವಿಡ್, ಡಾ.ಮಧುಪ್ರಸಾದ್, ಕಲಾವಿದ ನಾಗರಾಜ್ ಬೇದ್ರೇ, ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆಯ ಶಾರದ ಜಯರಾಂ ಉಪಸ್ಥಿತರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *