ಹಿರಿಯೂರು ಉಪಚುನಾವಣೆ: ಕಾಂಗ್ರೆಸ್ ಟಿಕೆಟ್‍ಗಾಗಿ ಆಕಾಂಕ್ಷಿ ಸಿ. ಶಿವು ಯಾದವ್ ಅಧಿಕೃತ ಅರ್ಜಿ ಸಲ್ಲಿಕೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಅ. 17 ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ “ಸ್ಪರ್ಧಿಸಲು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಕಾರ್ಯಾಧ್ಯಕ್ಷರು ಹಾಗೂ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಸಿ. ಶಿವು ಯಾದವ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಅಧಿಕೃತ ಅರ್ಜಿ ನಮೂನೆಯನ್ನು ಪಡೆದುಕೊಂಡಿದ್ದಾರೆ.

ಕಳೆದ 40 ವರ್ಷಗಳಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ಜಾತ್ಯತೀತ ಮೌಲ್ಯಗಳನ್ನು ಮೈಗೂಡಿಸಿಕೊಂಡು ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿರುವ ಅವರು, ಪಕ್ಷ ನೀಡಿದ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿ ಸಂಘಟನೆಗೆ ಶ್ರಮಿಸಿದ್ದಾರೆ. ಕಳೆದ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರೂ
ಅವಕಾಶ ಸಿಕ್ಕಿರಲಿಲ್ಲ. ಆದಾಗ್ಯೂ ಪಕ್ಷದ ನಿರ್ಧಾರಕ್ಕೆ ಬದ್ಧನಾಗಿ, ಯಾವುದೇ ಅಸಮಾಧಾನ ವ್ಯಕ್ತಪಡಿಸದೆ ಕಾಂಗ್ರೆಸ್ ಬಲವರ್ಧನೆಗೆ ಶ್ರಮಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ತಳೆದಿದ್ದು, ಕೆಪಿಸಿಸಿ ಯಿಂದ ಅರ್ಜಿ ಪಡೆದಿದ್ದೇನೆ.” ಎಂದು ಸಿ. ಶಿವು ಯಾದವ್ ತಿಳಿಸಿದ್ದಾರೆ.

ಪ್ರಸ್ತುತ ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿವುಯಾದವ್ಅ ವರು, ತಮ್ಮ ದೀರ್ಘಕಾಲದ ಸಾಮಾಜಿಕ ಸೇವೆ, ಸಂಘಟನಾ ಅನುಭವ ಹಾಗೂ ಕಾರ್ಯಕರ್ತರ ಬೆಂಬಲವನ್ನು ಪರಿಗಣಿಸಿ ಈ ಬಾರಿ ಹಿರಿಯೂರು ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರಲ್ಲಿ
ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು. ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *