ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಅ. 18: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ‘ಹನಿಟ್ರ್ಯಾಪ್’ ಬಳಸಿ ರಾಜಕೀಯ ನಾಯಕರನ್ನು ಹಾಗೂ ಸಾರ್ವಜನಿಕ ವ್ಯಕ್ತಿಗಳನ್ನು ಬ್ಲ್ಯಾಕ್ಮೇಲ್ ಮಾಡುವ ಸಂಸ್ಕೃತಿ ಹೆಚ್ಚುತ್ತಿದ್ದು, ಇದು ಅತ್ಯಂತ ಖಂಡನೀಯ ಹಾಗೂ ರಾಜ್ಯದ ರಾಜಕಾರಣದ ಕೀಳುಮಟ್ಟದ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಎಸ,ನವೀನ್ ಕಳವಳ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ ನಗರದಲ್ಲಿ ಭಾನುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಇಂತಹ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಇತ್ತೀಚಿನ ವರ್ಷಗಳಲ್ಲಿ ರಾಜ್ಯದಲ್ಲಿ ಕೇಳಿಬರುತ್ತಿರುವ ಹನಿಟ್ರ್ಯಾಪ್ ಪ್ರಕರಣಗಳು ಮತ್ತು ಗುಪ್ತ ಕ್ಯಾಮೆರಾ ಹಾಗೂ ಧ್ವನಿಮುದ್ರಿಕೆಗಳನ್ನು ಬಳಸಿ ವ್ಯಕ್ತಿಗಳನ್ನು ಬ್ಲ್ಯಾಕ್ಮೇಲ್ ಮಾಡುವ ಕೃತ್ಯಗಳು ಹೆಚ್ಚಾಗುತ್ತಿವೆ ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳ ವೈಯಕ್ತಿಕ ಬದುಕಿನ ಘಟನೆಗಳನ್ನು ದುರ್ಬಳಕೆ ಮಾಡಿಕೊಂಡು, ಸ್ವಾರ್ಥ ಲಾಭಕ್ಕಾಗಿ ಬ್ಲ್ಯಾಕ್ಮೇಲ್ ಮಾಡುವವರು ಸಮಾಜಕ್ಕೆ ಮಾರಕವಾಗಿದ್ದು, ಇಂತಹ ಪ್ರವೃತ್ತಿಯನ್ನು ತಡೆಗಟ್ಟಬೇಕು ಎಂದು ತಿಳಿಸಿದ ಅವರು ಬಿಜೆಪಿ ಅಥವಾ ಇನ್ಯಾವುದೇ ಪಕ್ಷದ ಹೆಸರಾಗಲಿ, ತಪ್ಪಿತಸ್ಥರು ಯಾರೇ ಆಗಿರಲಿ, ಈ ಕುರಿತು ಪಾರದರ್ಶಕ ತನಿಖೆ ನಡೆಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.
ರಾಜಕೀಯದಲ್ಲಿ ಅಧಿಕಾರಕ್ಕೆ ಬರಲು ಅಥವಾ ಜನಪ್ರಿಯತೆ ಗಳಿಸಲು ಜನರ ವಿಶ್ವಾಸ ಗಳಿಸಬೇಕೇ ಹೊರತು, ಇಂತಹ ಕೀಳುಮಟ್ಟದ ಕೃತ್ಯಗಳ ಮೂಲಕ ಎದುರಾಳಿಗಳನ್ನು ಹಣಿಯುವ ರಾಜಕಾರಣ ಸರಿಯಲ್ಲ ರಾಜ್ಯದ ಜನಸಾಮಾನ್ಯರು ಹಲವಾರು ಆರ್ಥಿಕ ಹಾಗೂ ಸಾಮಾಜಿಕ ಕಷ್ಟಗಳನ್ನು ಎದುರಿಸುತ್ತಿದ್ದು, ರಾಜಕೀಯ ಪಕ್ಷಗಳು ಮತ್ತು ನಾಯಕರು ಜನಪರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕೇ ವಿನಃ ಇಂತಹ ಕ್ಷುಲ್ಲಕ ವಿಚಾರಗಳಲ್ಲ ಎಂದು ಕಿವಿಮಾತು ಹೇಳಿದರು.
ರಾಜ್ಯ ರಾಜಕಾರಣದಲ್ಲಿ ವೈಯಕ್ತಿಕ ಬದುಕನ್ನು ಅಸ್ತ್ರವಾಗಿ ಬಳಸಿ ಬ್ಲ್ಯಾಕ್ಮೇಲ್ ಮಾಡುವ ‘ಹನಿಟ್ರ್ಯಾಪ್’ ಸಂಸ್ಕೃತಿಗೆ ಸಂಪೂರ್ಣವಾಗಿ ಕಡಿವಾಣ ಹಾಕಬೇಕು. ತಪ್ಪಿತಸ್ಥರು ಯಾವುದೇ ಪಕ್ಷದವರಾಗಲಿ, ಮುಲಾಜಿಲ್ಲದೆ ನಿಷ್ಪಕ್ಷಪಾತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ರಾಜಕಾರಣಿಗಳು ಮತ್ತು ಸಾರ್ವಜನಿಕರು ಜನಪರ ಹಾಗೂ ನೈತಿಕ ಮೌಲ್ಯಯುತ ರಾಜಕಾರಣಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
🟠 Instagram
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು