ಚಿತ್ರದುರ್ಗ ಅ.22
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಜಿಲ್ಲೆಯ ಹಿರೇಕಂದವಾಡಿ ಗ್ರಾಮದ ರಿ.ಸಂ. ನಂ. ೧೦೭ ಮತ್ತು ಮೇಗಳಹಳ್ಳಿ ಗ್ರಾಮದ ರಿ.ಸಂ. ನಂ. ೨೧ರ ವ್ಯಾಪ್ತಿಯಲ್ಲಿ ಒಟ್ಟು ೭೧.೧೬ ಹೆಕ್ಟೇರ್ ಪ್ರದೇಶದಲ್ಲಿ ಪ್ರಸ್ತಾಪಿತವಾಗಿರುವ ಜಂತಕಲ್ ಕಬ್ಬಿಣದ ಅದಿರು ಗಣಿಗಾರಿಕೆ ಯೋಜನೆಯನ್ನು ಕೈಬಿಡುವಂತೆ ಕರುನಾಡ ಛಲವಾದಿ ಮಹಾಸಭಾ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದೆ.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಮಾಹಿತಿಯನ್ನು ನೀಡಿದ ಕರುನಾಡ ಛಲವಾದಿ ಮಹಾಸಭಾದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಿವಪ್ರಸಾದ್ ಈ ಗಣಿಗಾರಿಕೆ ಯೋಜನೆಯಿಂದ ಸ್ಥಳೀಯ ಪರಿಸರ, ಜನರ ಆರೋಗ್ಯ, ಕುಡಿಯುವ ನೀರಿನ ಮೂಲಗಳು, ಕೃಷಿ ಚಟುವಟಿಕೆಗಳು, ಜಾನು ವಾರುಗಳು ಹಾಗೂ ಗ್ರಾಮೀಣ ಜನರ ಜೀವನೋಪಾಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುವ ಆತಂಕವಿದೆ. ಗಣಿಗಾರಿಕೆಯಿಂದ ಧೂಳಿನ ಮಾಲಿನ್ಯ, ನೀರಿನ ಲಭ್ಯತೆಯ ಮೇಲೆ ಪರಿಣಾಮ ಮತ್ತು ಕೃಷಿ ಚಟುವಟಿಕೆಗಳಿಗೆ ತೊಂದರೆ ಉಂಟಾದರೆ ಸ್ಥಳೀಯ ಜನರ ಬದುಕು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ ಈ ಹಿನ್ನೆಲೆಯಲ್ಲಿ, ಜಂತಕಲ್ ಗಣಿಗಾರಿಕೆ ಯೋಜನೆಯನ್ನು ಕೈಬಿಡಬೇಕು. ಎಂದು ಶಿವಪ್ರಸಾದ್ ಒತ್ತಾಯಿಸಿದ್ದಾರೆ.
ಈ ಯೋಜನೆಗೆ ಸಂಬಂಧಿಸಿದ ಪರಿಸರ ಪರಿಣಾಮಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸಬೇಕು. ಸ್ಥಳೀಯ ಗ್ರಾಮಸ್ಥರ ಅಭಿಪ್ರಾಯಗಳನ್ನು ಆಲಿಸಬೇಕು ಹಾಗೂ ಕುಡಿಯುವ ನೀರು, ಕೃಷಿಭೂಮಿ ಮತ್ತು ಜಾನು ವಾರುಗಳ ರಕ್ಷಣೆಗೆ ಆದ್ಯತೆ ನೀಡಬೇಕು ಯೋಜನೆಗೆ ಸಂಬಂಧಿಸಿದ ಪರಿಸರ ಅನುಮತಿಗಳು ಮತ್ತು ಕಾನೂನುಬದ್ಧ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ, ಸ್ಥಳೀಯ ಜನರ ಆತಂಕಗಳಿಗೆ ಪರಿಹಾರ ದೊರೆಯು ವವರೆಗೆ ಗಣಿಗಾರಿಕೆ ಆರಂಭಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಅಭಿವೃದ್ಧಿಯ ಹೆಸರಿನಲ್ಲಿ ಪರಿಸರ ಮತ್ತು ಗ್ರಾಮೀಣ ಜನರ ಜೀವನೋಪಾಯಕ್ಕೆ ಧಕ್ಕೆಯಾಗಬಾರದು. ಜನರ ಹಿತಾಸಕ್ತಿ ಹಾಗೂ ಮುಂದಿನ ಪೀಳಿಗೆಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ, ಜಿಲ್ಲಾಡಳಿತ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ಈ ಯೋಜನೆಯನ್ನು ಕೈಬಿಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕರುನಾಡ ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷ ಶಿವಪ್ರಸಾದ್ ಆಗ್ರಹಿಸಿದ್ದಾರೆ.
ಗೋಷ್ಟಿಯಲ್ಲಿ ನವೀನ್ ಕುಮಾರ್, ರಾಜಶೇಖರ್, ಮಧುಸೂಧನ್,ಮ ಕರಿಯಪ್ಪ, ಹರೀಶ್, ಪ್ರಸನ್ನಕುಮಾರ್, ರವಿಕುಮಾರ್,ಸಂತೋಷ್, ನಂದೀಮ್ ಸೇರಿದಂತೆ ಇತರರು ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
🟠 Instagram
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು