ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 11ರಂದು ಒಟ್ಟು 37 ವಿವಿಧ ವಿಷಯಗಳಿಗೆ ಈ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು.
ಈ ಹಿಂದೆ ಪ್ರಕಟಿಸಲಾಗಿದ್ದ ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಬಂದಿದ್ದ ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಬಳಿಕ ಈ ತಾತ್ಕಾಲಿಕ ಫಲಿತಾಂಶವನ್ನು ಸಿದ್ಧಪಡಿಸಲಾಗಿದೆ. ಇದರ ಜೊತೆಗೆ ಪರೀಕ್ಷೆಯ ‘ಅಂತಿಮ ಕೀ ಉತ್ತರ’ಗಳನ್ನು (Final Key Answers) ಸಹ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.


ಆಕ್ಷೇಪಣೆ ಸಲ್ಲಿಸಲು ಅವಕಾಶ: ಪ್ರಕಟವಾಗಿರುವ ಈ ತಾತ್ಕಾಲಿಕ ಫಲಿತಾಂಶದ ಕುರಿತು ಅಭ್ಯರ್ಥಿಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಸೂಕ್ತ ಪೂರಕ ದಾಖಲೆಗಳೊಂದಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಅಕ್ಟೋಬರ್ 26ರ ಬೆಳಿಗ್ಗೆ 10:30ರ ಒಳಗಾಗಿ ಪ್ರಾಧಿಕಾರದ ಅಧಿಕೃತ ಇ-ಮೇಲ್ ಅಥವಾ ವೆಬ್‌ಸೈಟ್ (cetonline.Karnataka.gov.in/kea/) ಮೂಲಕ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು